Breaking News
Home / Madikeri / ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ದರ್ಶನ ನೀಡಿದ್ದಾರೆ.

ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ದರ್ಶನ ನೀಡಿದ್ದಾರೆ.

Spread the love

ಮಡಿಕೇರಿ: ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ದರ್ಶನ ನೀಡಿದ್ದಾರೆ.ಇಂದು ಬೆಳಗ್ಗೆ 7 ಗಂಟೆ 3 ನಿಮಿಷಕ್ಕೆ ಕನ್ಯಾಲಗ್ನದಲ್ಲಿ ತೀರ್ಥೋದ್ಭವವಾಗಿದೆ. ಬ್ರಹ್ಮಕುಂಡಿಕೆಯ ಬಳಿ ಗೋಪಾಲ್ ಕೃಷ್ಣ ಆಚಾರ್ ನೇ ತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯ ನೆರವೇರುತ್ತಿದ್ದು, ಬ್ರಹ್ಮ ಕುಂಡಿಕೆ, ಅಗಸ್ತೇಶ್ವರ ದೇವಾಲಯ ಮತ್ತು ಭಾಗಮಂಡಲ ದೇವಾಲಯಗಳಿಗೆ ವಿದ್ಯುತ್ ದೀಪ ಮತ್ತು ಪುಷ್ಪಾಲಂಕಾರ ಮಾಡಲಾಗಿದೆ.

ಕೋವಿಡ್ ಮಿತಿ ಮೀರುತ್ತಿರುವುದರಿಂದ ತೀರ್ಥೋಧ್ಭವ ಸಂದರ್ಭದಲ್ಲಿ ದೇವಾಲಯ ಅರ್ಚಕರು, ಸಿಬ್ಬಂದಿ ಮತ್ತು ಉಸ್ತುವಾರಿ ಸಚಿವರು ಹಾಗೂ ಕೆಲವೇ ಅಧಿಕಾರಿಗಳಿಗೆ ಮಾತ್ರವೇ ಭಾಗವಹಿಸಲು ಅವಕಾಶ ನೀಡಲಾಗಿದೆ. ತೀರ್ಥೋಧ್ಭವದ ಬಳಿಕ ಭಕ್ತರು ತಲಕಾವೇರಿಗೆ ಬಂದು ತೀರ್ಥ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ತೀರ್ಥ ಪಡೆದುಕೊಳ್ಳಲು ನೂಕುನುಗ್ಗಲು ಆಗದಂತೆ ಕೊಳದ ಸುತ್ತಮುತ್ತ ಬ್ಯಾರಿಕೇಡ್ ಅಳವಡಿಸಲಾಗಿದೆ. ತೀರ್ಥ ವಿತರಣೆಗೆ ಐದು ಕೌಂಟರ್ ತೆರಯಾಗಿದ್ದು, ಪ್ರತೀ ಕೌಂಟರ್ ಬಳಿ ತಲಾ ಎರಡು ಮೂರು ಕೊಳಾಯಿಗಳನ್ನು ಇಟ್ಟು ವ್ಯವಸ್ಥೆ ಮಾಡಲಾಗಿದೆ. ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವ ಭಕ್ತರಿಗೆ ಕೋವಿಡ್ ಟೆಸ್ಟ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ.

ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಸಮಾಧಾನ:
ಕಾವೇರಿ ತೀರ್ಥೋಧ್ಭವಕ್ಕೆ ಭಾಗವಹಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಸಮಾಧಾನ ಹೊರಹಾಕಿದ್ದಾರೆ. ತಲಕಾವೇರಿ ಹೆಬ್ಬಾಗಿಲಿನಲ್ಲೇ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕೊಡಗಿನ ಪದ್ಧತಿ ಬಗ್ಗೆ ಡಿಸಿಗೆ ಏನು ಗೊತ್ತು. ತೀರ್ಥೋಧ್ಭವ ವರ್ಷಕ್ಕೆ ಒಮ್ಮೆ ಆಗೋದು. ಅದಕ್ಕೆ ಬಿಡೋದಿಲ್ಲ ಅಂದರೆ ಹೇಗೆ?. ಇದು ಭಾರತವೇ ಇಲ್ಲ ಪಾಕಿಸ್ತಾನವೇ. ಎಲ್ಲದಕ್ಕೂ ಕೊರೊನಾ ಕೊರೊನಾ ಎಂದರೆ ಹೇಗೆ?. ಎಲ್ಲವನ್ನು ಅವರ ಇಚ್ಛೆಯಂತೆ ಮಾಡಿದರೆ ಹೇಗೆ ಎಂದು ಪ್ರಶ್ನಿಸುವ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಉಗ್ರನಿಂದ ಬಾಂಬ್‌ ಸ್ಫೋಟದ ಬೆದರಿಕೆ ಬಂದಿದೆ ಎಂದವನ ವಿರುದ್ಧ ಎಫ್‌ಐಆರ್‌

Spread the loveಬೆಂಗಳೂರು: ಬಸವೇಶ್ವರ ನಗರದ ಖಾಸಗಿ ಶಾಲೆಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದ ಬೆನ್ನಲ್ಲೇ ಪಾಕಿಸ್ತಾನದ ಉಗ್ರನೊಬ್ಬ ಬೆಂಗಳೂರಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ