Breaking News
Home / ಜಿಲ್ಲೆ / ಬಿಜಾಪುರ / ಬಸನಗೌಡ ಪಾಟೀಲ ಯತ್ನಾಳ ಮತ್ತು ನಾವು ಆತ್ಮೀಯ ಸ್ನೇಹಿತರು:B.S.Y.

ಬಸನಗೌಡ ಪಾಟೀಲ ಯತ್ನಾಳ ಮತ್ತು ನಾವು ಆತ್ಮೀಯ ಸ್ನೇಹಿತರು:B.S.Y.

Spread the love

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ನಾವು ಆತ್ಮೀಯ ಸ್ನೇಹಿತರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೋ ಒಂದೆರಡು ಸಂದರ್ಭದಲ್ಲಿ ಹೇಳಿಕೆ ನೀಡಿರುವುದನ್ನು ನಾವು ಅಪರಾಧ ಎಂದು ಪರಿಗಣಿಸುವುದಿಲ್ಲ.

ನಮ್ಮ ಮಧ್ಯದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೂ ಒಟ್ಟಾಗಿ ಹೋಗುತ್ತೇವೆ ಸ್ಪಷ್ಟಪಡಿಸಿದರು.

ವಿಜಯೇಂದ್ರ ಹಾಗೂ ರಾಜ್ಯದ ಯಾವುದೇ ಬಿಜೆಪಿ ಶಾಸಕರ ಟಿಕೆಟ್‌ ನಿರ್ಧಾರವನ್ನು ಚುನಾವಣಾ ಸಮಿತಿ ಮಾಡುತ್ತದೆ. ನಾವು ಕೇವಲ ಸಲಹೆ ಕೊಡಬಹುದು. ಅಂತಿಮ ತೀರ್ಮಾನ ಚುನಾವಣೆಯ ಸಮಿತಿಯದ್ದಾಗಿದೆ.

ಬಿಜೆಪಿಯ ಯಾವುದೇ ಸಭೆ-ಸಮಾರಂಭ ಮತ್ತು ರೋಡ್‌ ಶೋಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರುತ್ತಿರುವುದು ಮತ್ತು ಅವರ ಪ್ರೀತಿ, ವಿಶ್ವಾಸವನ್ನು ಗಮನಿಸಿದಾಗ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದರು.


Spread the love

About Laxminews 24x7

Check Also

ಅದಾನಿ ಮ್ಯಾನೇಜರ್‌ ಮಾತ್ರ, ದುಡ್ಡೆಲ್ಲಾ ಪ್ರಧಾನಿ ನರೇಂದ್ರ ಮೋದಿಯದ್ದು: ಕೇಜ್ರಿವಾಲ್

Spread the love ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ