Breaking News

ಬೆಳಗಾವಿ ನಗರದ ಕ್ಲಬ್ ರೋಡ್ ನಲ್ಲಿರುವ ಸಿಪಿಇಡಿ ಗ್ರೌಂಡ್‌ನಲ್ಲಿ17ರಂದು ಅಪ್ಪು ಜನ್ಮದಿನೋತ್ಸವ

Spread the love

ಬೆಳಗಾವಿ: ಡಾ. ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಮಾರ್ಚ್ 17ರಂದು  ‘ಅಪ್ಪು ಜನ್ಮದಿನೋತ್ಸವ’  ಕಾರ್ಯಕ್ರಮ ಆಯೋಜಿಸಲಾಗಿದೆ.

ನಗರದ ಕ್ಲಬ್ ರೋಡ್ ನಲ್ಲಿರುವ ಸಿಪಿಇಡಿ ಗ್ರೌಂಡ್‌ನಲ್ಲಿ ಅದ್ಧೂರಿ ಸಮಾರಂಭವನ್ನು ಅಪ್ಪು ಅಭಿಮಾನಿ ಬಳಗ ಅಯೋಜಿಸಿದೆ. ಅಂದು ಸಂಜೆ 4.30ರಿಂದ ಕಾರ್ಯಕ್ರಮಗಳು ಆರಂಭವಾಗಲಿದ್ದು, ಈ ಶುಭ ಸಂದರ್ಭದಲ್ಲಿ ಮಮತ ಕ್ರಿಯೇಷನ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಪರ್ಯಾಯ ಕನ್ನಡ ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗುವುದು ಎಂದು ಅಪ್ಪು ಜನ್ಮದಿನೋತ್ಸವ ದ ಸಂಘಟಕ ರಾಜಕುಮಾರ್ ತಿಳಿಸಿದ್ದಾರೆ.

ಶ್ರೀ ಶಂಕರಲಿಂಗ ಗುರುಪೀಠ ಸುಕ್ಷೇತ್ರ ಕೆಸರಟ್ಟೆಯ ಶ್ರೀ  ಸೋಮಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಚಲನಚಿತ್ರ ನಿರ್ದೇಶಕ ರಮಾನಂದ ಮಿತ್ರ, ಮಮತ ಕ್ರಿಯೇಷನ್‌ನ ರಾಜಕುಮಾರ, ಸಹ ನಿರ್ಮಾಪಕರಾದ ಮುರುಗೇಶ್ ಬಿ. ಶಿವಪೂಜಿ, ಶಿವಾನಂದ್ ಹಾಗೂ ಹಲವಾರು ಕಲಾವಿದರು ಉಪಸ್ಥಿತರಿರುವರು.

ಪುನೀತ್ ರಾಜ್‌ಕುಮಾರ್ ಅವರ ಚಲನಚಿತ್ರದ  ಜನಪ್ರಿಯ ಹಾಡುಗಳನ್ನು ಸ್ಥಳೀಯ ಕಲಾವಿದರು ಹಾಡಲಿದ್ದಾರೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ. ಅಭಿಮಾನಿ ಕಲಾ ಪ್ರೇಕ್ಷಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ  ಎಂದು ಅಪ್ಪು ಅಭಿಮಾನಿ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ