Breaking News
Home / ಜಿಲ್ಲೆ / ಬೆಳಗಾವಿ / ಖಾನಾಪುರ / ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ತಂಡ ಬಂಧಿಸಿದೆ.

ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ತಂಡ ಬಂಧಿಸಿದೆ.

Spread the love

ಖಾನಾಪುರ: ತಾಲೂಕಿನ ನಂದಗಡದಲ್ಲಿ ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ತಂಡ ಬಂಧಿಸಿದೆ.

ಡೆವಿಡ್ ಫಿಗೇರ್ ಮತ್ತು ಹಸನ್ ಬೇಪಾರಿ ಬಂಧಿತರು. ಇವರಿಂದ 11 ಕೆಜಿ ಕಾಡುಕೋಣದ ಮಾಂಸ, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ, ೆರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

 

 

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 

 

ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಅವರ ನಿರ್ದೇಶನ, ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಬಾನು ಜಿ.ಪಿ. ಮಾರ್ಗದರ್ಶನ, ಖಾನಾಪುರ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಚವ್ಹಾಣ ನೇತೃತ್ವದಲ್ಲಿ ಖಾನಾಪುರ ವಲಯ ಅರಣ್ಯಾಧಿಕಾರಿ ಕವಿತಾ ಇರನಟ್ಟಿ, ನಂದಗಡ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಮಾಳಪ್ಪ ಲಚ್ಯಾಣ, ರಾಘವೇಂದ್ರ ಕಂಟಿಕಾರ, ಗಸ್ತು ಅರಣ್ಯ ಪಾಲಕ ಮಲ್ಲೇಶಪ್ಪಾ ಬಿರಾದಾರ, ಅರಣ್ಯ ವೀಕ್ಷಕ ಸಮೀರ್ ಶೇಖ್ ಕಾರ್ಯಾಚರಣೆ ನಡೆಸಿದ ತಂಡದಲ್ಲಿದ್ದರು.


Spread the love

About Laxminews 24x7

Check Also

ಅದಾನಿ ಮ್ಯಾನೇಜರ್‌ ಮಾತ್ರ, ದುಡ್ಡೆಲ್ಲಾ ಪ್ರಧಾನಿ ನರೇಂದ್ರ ಮೋದಿಯದ್ದು: ಕೇಜ್ರಿವಾಲ್

Spread the love ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ