ಹಾವೇರಿ : ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್ ಮನೆ ಮೇಲೆ ನಿನ್ನೆ ತಡರಾತ್ರಿ ದಾಳಿಯಾಗಿದ್ದು, ಈ ವೇಳೆ ಆರ್.ಶಂಕರ್ ಗೃಹಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ.
ಆರ್.ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟಾ ಹಾಗೂ ಎಲ್.ಕೆ.ಜಿಯಿಂದ ಪದವಿ ಕಾಲೇಜು ಮಕ್ಕಳ ತನಕ ಹಂಚಲು ತಂದಿದ್ದ ಸ್ಕೂಲ್ ಬ್ಯಾಗ್ ಸಿಕ್ಕಿದೆ.
ಸುಮಾರು 8 ಕೊಟಿ ರೂಪಾಯಿ ವೆಚ್ಚದ ವಸ್ತುಗಳು ಪತ್ತೆಯಾಗಿವೆ ಎಂದು ಅಂದಾಜಿಸಲಾಗಿದ್ದು, ಈ ಎಲ್ಲ ವಸ್ತುಗಳ GST ಬಿಲ್ ಕೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಆರ್ ಶಂಕರ್, ಬಿಲ್ ಕೊಡಲು ಅವಕಾಶ ಕೇಳಿದ್ದಾರೆ. ಒಂದು ವೇಳೆ ಸರಿಯಾದ ಜಿಎಸ್‌ಟಿ ಬಿಲ್ ಇಲ್ಲದಿದ್ರೆ ದಂಡ ವಿಧಿಸುವ ಸಾಧ್ಯತೆ ಇದೆ.