Breaking News

ಭೀಮೆ, ಕೃಷ್ಣಾರ್ಭಟಕ್ಕೆ ಉತ್ತರ ಕರ್ನಾಟಕದ ಮಂದಿ ಬೆಚ್ಚಿಬಿದ್ದಿದ್ದಾರೆ.

Spread the love

ಕಲಬುರಗಿ: ಭೀಮೆ, ಕೃಷ್ಣಾರ್ಭಟಕ್ಕೆ ಉತ್ತರ ಕರ್ನಾಟಕದ ಮಂದಿ ಬೆಚ್ಚಿಬಿದ್ದಿದ್ದಾರೆ. ಊರಿಗೆ ಊರೇ ಮುಳುಗಡೆಯಾಗಿ, ಜನಜೀವನ ಅಯೋಮಯವಾಗಿದೆ. ಮನೆ, ಮಠ ಕಳೆದುಕೊಂಡ ಜನ ಕಣ್ಣೀರ ಹೊಳೆಯನ್ನೇ ಹರಿಸ್ತಿದ್ದಾರೆ. ಕಲಬುರಗಿಯಲ್ಲಂತೂ ಜಲರಾಕ್ಷಸ ಘನಘೋರ ಪರಿಸ್ಥಿತಿ ನಿರ್ಮಾಣ ಮಾಡಿದ್ದಾನೆ.ಹೌದು.

ಉತ್ತರ ಕರ್ನಾಟಕದ ಸ್ಥಿತಿ ನಿಜಕ್ಕೂ ದುರಂತ ಅಂದ್ರೆ ತಪ್ಪಾಗಲ್ಲ. ಹಳ್ಳಿಗೆ ಹಳ್ಳಿಗಳನ್ನೇ ಮುಳುಗಿಸಿದೆ. ಮನೆಯೊಳಗೂ ನೀರು, ಹೊರಗೂ ನೀರು, ಅಕ್ಕಿ, ಗೋಧಿ, ಹೊಲ, ಗದ್ದೆ ಎಲ್ಲವೂ ನೀರುಪಾಲಾಗಿವೆ. ಕಲಬುರಗಿಯನ್ನಂತು ಮಹಾಮಳೆ ಮುಳುಗಿಸಿ ಬಿಟ್ಟಿದೆ. ರಣಭೀಕರ ನೆರೆ ಸುಮಾರು 140ಕ್ಕೂ ಹೆಚ್ಚು ಹಳ್ಳಿಗಳನ್ನು ಹಿಂಡಿ ಹಿಪ್ಪೆ ಮಾಡಿದೆ. ಇಂದು ಕೆಲ ಗ್ರಾಮಗಳಲ್ಲಿ ಪ್ರವಾಹ ಕಡಿಮೆಯಾಗಿದ್ದು, ಜನರು ತಮ್ಮ ತಮ್ಮ ಮನೆಗಳ ಪರಿಸ್ಥಿತಿಯನ್ನು ಕಂಡು ಕಣ್ಣೀರು ಹಾಕುತ್ತಿದ್ದಾರೆ. ಅಫ್ಜಲ್ ಪುರದ ತಾಲೂಕಿನಲ್ಲಿ ಬಂಕಲಿಗೆ ಗ್ರಾಮ ಸಂಪೂರ್ಣ ಸರ್ವನಾಶವಾಗಿದ್ದು, ಸುಮಾರು 200ಕ್ಕೂ ಹೆಚ್ಚಿನ ಮನೆಗಳು ಸಂಪೂರ್ಣವಾಗಿ ಕೊಚ್ಚಿಹೋಗಿವೆ. ಮನೆಯಲ್ಲಿ ಇದ್ದ ಅಕ್ಕಿ, ಗೊಧಿ, ಪಾತ್ರೆ, ಟಿವಿ ಎಲ್ಲವೂ ಹಾಳಾಗಿವೆ. ಇದನ್ನ ನೋಡಿ ಗ್ರಾಮಸ್ಥರು ಕಣ್ಣೀರು ಹಾಕುತ್ತಿದ್ದಾರೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ