Home / ರಾಜಕೀಯ / ಡಿಜಿಪಿ ಪ್ರವೀಣ್ ಸೂದ್ ಒಬ್ಬ ನಾಲಾಯಕ್: ಡಿಕೆಶಿ

ಡಿಜಿಪಿ ಪ್ರವೀಣ್ ಸೂದ್ ಒಬ್ಬ ನಾಲಾಯಕ್: ಡಿಕೆಶಿ

Spread the love

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಬಂಧಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರವೀಣ್ ಸೂದ್ ಅವರು ಆಡಳಿತಾರೂಢ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ರಕ್ಷಣೆ ಮಾಡುತ್ತಿದ್ದಾರೆ.

ಆದರೆ, ನಮ್ಮ ಪಕ್ಷದ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ’ ಎಂದು ಡಿಕೆಶಿ ದೂರಿದ್ದಾರೆ.

‘ಡಿಜಿಪಿ ನಾಲಾಯಕ್ (ನಿಷ್ಪ್ರಯೋಜಕ). ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು’ ಎಂದು ಶಿವಕುಮಾರ್ ಆಗ್ರಹಿಸಿದ್ದಾರೆ.

‘ಪ್ರವೀಣ್ ಸೂದ್ ಡಿಜಿಪಿಯಾಗಿ ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ. ಎಷ್ಟು ದಿನ ಅವರನ್ನೇ ಡಿಜಿಪಿ ಹುದ್ದೆಯಲ್ಲಿ ಇಟ್ಟುಕೊಂಡು ಪೂಜೆ ಮಾಡುತ್ತೀರಿ? ಕಾಂಗ್ರೆಸ್‌ನವರ ಮೇಲೆ ಮಾತ್ರ ಪ್ರಕರಣ ದಾಖಲಿಸುತ್ತಿದ್ದಾರೆ. ನಮ್ಮ ಮೇಲೆ 25ಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಅವರ ವಿರುದ್ಧ ಕ್ರಮ ಜರುಗಿಸುವುದು ಖಚಿತ’ ಎಂದು ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲು 224 ಸದಸ್ಯ ಬಲದ ವಿಧಾನಸಭೆಯಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಡಿಕೆಶಿ ತಿಳಿಸಿದ್ದಾರೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ವಿಧಾನಸಭೆ ಚುನಾವಣೆಗೆ ಜೆಡಿಎಸ್ ಈಗಾಗಲೇ 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲ.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ