Breaking News

ಈ ಬಾರಿ ಬಳ್ಳಾರಿ ಗ್ರಾಮೀಣದಿಂದ ಸ್ಪರ್ಧೆ: ಸಚಿವ ಶ್ರೀರಾಮುಲು

Spread the love

ಳ್ಳಾರಿ: ಈ ಬಾರಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪ ರ್ಧಿಸುತ್ತೇನೆಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿದ್ದೇನೆ.

ಇದೀಗ ಮತ್ತೊಮ್ಮೆ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಈ ಕುರಿತು ಪಕ್ಷದ ಹೈಕಮಾಂಡ್‌ ಗಮನಕ್ಕೂ ತಂದಿದ್ದೇನೆ. ಸಂಡೂರು ಅಥವಾ ಬಳ್ಳಾರಿ ಗ್ರಾಮೀಣ ಕ್ಷೇತ್ರ ಎಂಬ ಆಯ್ಕೆಯಿತ್ತು. ಆದರೆ, ಬಹುತೇಕ ಎಲ್ಲರ ಅಪೇಕ್ಷೆಯ ಮೇರೆಗೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಚ್ಚಾಟದ ಮಧ್ಯೆ ಬಿಜೆಪಿ ಸರ್ಕಾರ ಮತ್ತೆ ಅಧಿ ಕಾರಕ್ಕೆ ಬರುವುದು ನಿಶ್ಚಿತ. ಬಿಜೆಪಿ ಅಧಿಕಾರಕ್ಕೆ ಬಂದಾಗ ಒಳ್ಳೆಯ ಅವಕಾಶ ಸಿಕ್ಕೇ ಸಿಗುತ್ತದೆ ಎಂದು ಮತ್ತೂಮ್ಮೆ ಉಪ ಮುಖ್ಯಮಂತ್ರಿ ಆಗುವ ಕನಸನ್ನು ಬಿಚ್ಚಿಟ್ಟರು.


Spread the love

About Laxminews 24x7

Check Also

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್‌

Spread the loveಬಳ್ಳಾರಿ: ಖಾಸಗಿ ಶಾಲಾ ಹಾಸ್ಟೆಲ್‌ನಲ್ಲಿ ಹಲ್ಲೆ ಮಾಡಿ ನಾಪತ್ತೆಯಾಗಿದ್ದ ಬಾಲಕನನ್ನು ಪೊಲೀಸರು  ಕೊನೆಗೂ ಪತ್ತೆ ಹಚ್ಚಿದ್ದಾರೆ. ಮೊನ್ನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ