Breaking News

ಎಸ್‌.ಯಡಿಯೂರಪ್ಪ ಅವರ ಆಪ್ತ ಮೋಹನ ಲಿಂಬಿಕಾಯಿ ಕಾಂಗ್ರೆಸ್‌ ಸೇರ್ಪಡೆ

Spread the love

ಬೆಳಗಾವಿ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಅವರ ಆಪ್ತರಾಗಿದ್ದ, ವಿಧಾನ ಪರಿಷತ್‌ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಅವರು ನಗರದಲ್ಲಿ ಗುರುವಾರ ಕಾಂಗ್ರೆಸ್‌ ಸೇರಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

 

ನಂತರ ಮಾತನಾಡಿದ ಮೋಹನ, ‘ಬಿಜೆಪಿಯಲ್ಲಿ ಉಸಿರುಗಟ್ಟಿದ ವಾತಾವರಣವಿದೆ. ಅಲ್ಲಿ ಕಾರ್ಯಕರ್ತರಿಗೆ ಬೆಲೆ ಉಳಿದಿಲ್ಲ. ಕೆಲವೇ ನಾಯಕರು ಎಲ್ಲ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದರಿಂದ ಬೇಸತ್ತು ಕಾಂಗ್ರೆಸ್‌ಗೆ ಬಂದಿದ್ದೇನೆ’ ಎಂದರು.

‘ಬಿಜೆಪಿ ಸರ್ಕಾರಗಳು ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ದೂರ ಸರಿದಿವೆ. ಹೀಗಾಗಿ, ಎಐಸಿಸಿ ಹಾಗೂ ಕೆಪಿಸಿಸಿ ತತ್ವಗಳನ್ನು ಮನವರಿಕೆ ಮಾಡಿಕೊಂಡು ಇಲ್ಲಿಗೆ ಬಂದಿದ್ದೇನೆ. ಯಾವುದೇ ಷರತ್ತು ಹಾಕದೇ ಸಾಮಾನ್ಯ ಕಾರ್ಯಕರ್ತನಾಗಿ ಸೇರಿಕೊಂಡಿದ್ದೇನೆ’ ಎಂದರು


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ