Breaking News

-ದೇಶಾದ್ಯಂತ ನವರಾತ್ರಿ ಸಡಗರ ಸಂಭ್ರಮನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

Spread the love

ಬೆಂಗಳೂರು, ಅ.17-ದೇಶಾದ್ಯಂತ ನವರಾತ್ರಿ ಸಡಗರ ಸಂಭ್ರಮ ಇಂದಿನಿಂದ ಆರಂಭವಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ, ಮಹಮೋಹನ್ ಸಿಂಗ್, ಕೇಂದ್ರ ಸಚಿವರಾದ ಅಮಿತ್ ಷಾ, ಡಿ.ವಿ.ಸದಾನಂದಗೌಡ, ಕಾಂಗ್ರೆಸ್ ನಾಯಕರಾದ ರಾಹುಲ್‍ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿಂದಂತೆ ವಿವಿಧ ಪಕ್ಷಗಳ ಧುರೀಣರು ದೇಶದ ಜನತೆಗೆ ಶುಭ ಕೋರಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಎಸ್.ಎಂ.ಕೃಷ್ಣ, ರಾಜ್ಯದ ಸಚಿವರು, ಸಂಸದರು ಶಾಸಕರು ಸೇರಿದಂತೆ ಹಲವು ಗಣ್ಯರು ನವರಾತ್ರಿ ಉತ್ಸವದ ಶುಭಾಶಯವನ್ನು ನಾಡಿನ ಜನತೆಗೆ ಕೋರಿದ್ದಾರೆ.

ಇಂದಿನಿಂದ ನವರಾತ್ರಿ ಉತ್ಸವ ಆರಂಭವಾಗಿದೆ. ಮೊದಲ ದಿನ ಶೈಲ ಪುತ್ರಿಯನ್ನು ಆರಾಧಿಸಲಾಗುತ್ತದೆ. ಈ ಮಹಾ ಮಾತೆ ವಿಶ್ವದಲ್ಲಿ ಆರೋಗ್ಯ,ಸುಖ-ಶಾಂತಿ , ನೆಮ್ಮದಿ ನೀಡಲಿ ಎಂದು ಗಣ್ಯರು ಹಾರೈಸಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ