Breaking News

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಹುತೇಕ ಫೈನಲ್ ಆಗಿದ್ದು, ಇಂದು ಸಂಜೆ ವೇಳೆಗೆ ಬಿಡುಗಡೆ

Spread the love

ನವದೆಹಲಿ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಹುತೇಕ ಫೈನಲ್ ಆಗಿದ್ದು, ಇಂದು ಸಂಜೆ ವೇಳೆಗೆ ಬಿಡುಗಡೆಯಾಗುವ ಸಾಧ್ಯತೆ ಇದೆ.

ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ರಣದೀಪ್ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್ ವರಿಷ್ಠರ ನೇತೃತ್ವದಲ್ಲಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದ್ದು, ಕೈ ಅಭ್ಯರ್ಥಿಗಳ ಹೆಸರು ಮತ್ತೊಮ್ಮೆ ಫೈನಲ್ ಆಗಲಿದೆ. ಸಭೆ ಬಳಿಕ ಸಂಜೆಯೇ ಅಭ್ಯರ್ಥಿಗಳ ಹೆಸರು ಘೋಷಣೆಯಾದರೂ ಅಚ್ಚರಿ ಇಲ್ಲ.

ಕಾಂಗ್ರೆಸ್ ಅಭ್ಯರ್ಹಿಗಳ ವಿಚರವಾಗಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಒತ್ತಡವೂ ಇಲ್ಲ. ಗೆಲ್ಲುವ ಕಡೆಗಳಲ್ಲಿ ಯುವಕರು ಮಹಿಳೆಯರಿಗೂ ಟಿಕೆಟ್ ಕೊಡಲಾಗುವುದು ಎಂದರು.

ಯಾವ ಯಾವ ಅಭ್ಯರ್ಥಿಗಳು ಶ್ರಮಿಸಿದ್ದಾರೆ ಎಂಬುದು ಗೊತ್ತಿದೆ. ಕಳೆದ ಮೂರು ವರ್ಷಗಳಿಂದ ಅಭ್ಯರ್ಥಿಗಳ ಶ್ರಮದ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗಿದೆ. ಸಿಇಸಿ ಜತೆ 5-6 ಬಾರಿ ಸಭೆ ನಡೆಸಿದ್ದೇವೆ. 8-10 ಬಾರಿ ಸರ್ವೆ ಆಗಿದೆ. ಬಹುತೇಕ ಎಲ್ಲಾ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಈ ಎಲ್ಲದರ ಬಗ್ಗೆಯೂ ಕಾಂಗ್ರೆಸ್ ಕೇಂದ್ರ ಚುನಾವಣೆ ಸಮಿತಿಯಲ್ಲಿ ಚರ್ಚೆಯಾಗಲಿದೆ. ಮಧ್ಯಾಹ್ನ ಮೂರು ಗಂಟೆಗೆ ಸಮಿತಿ ನಾಯಕರ ಜೊತೆ ಚರ್ಚಿಸುತ್ತೇವೆ ಎಂದರು.


Spread the love

About Laxminews 24x7

Check Also

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

Spread the love ವಿಜಯಪುರ: ಜಿಲ್ಲೆಯಲ್ಲಿ ಚಡಚಣ (Chadachana) ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ