Breaking News

ಜಗ್ಗೇಶ್ ‘ರಾಘವೇಂದ್ರ ಸ್ಟೋರ್ಸ್’ ರಿಲೀಸ್ ಡೇಟ್ ಫಿಕ್ಸ್

Spread the love

ವರಸ ನಾಯಕ ಜಗ್ಗೇಶ್ ನಟನೆಯ ಮುಂದಿನ ಬಹುನಿರೀಕ್ಷಿತ ‘ರಾಘವೇಂದ್ರ ಸ್ಟೋರ್ಸ್’ ಚಿತ್ರವು ಕೊನೆಗೂ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಜಗ್ಗೇಶ್ ಹುಟ್ಟುಹಬ್ಬದ ದಿನವಾದ ಇಂದು (ಮಾರ್ಚ್ 17) ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಚಿತ್ರದ ರಿಲೀಸ್ ದಿನಾಂಕ ಘೋಷಣೆ ಮಾಡಿದೆ.

 

“ನಮ್ಮ ರಾಘವೇಂದ್ರ ಸ್ಟೋರ್ಸ್‌ನ ಖ್ಯಾತ ಬಾಣಸಿಗರಾದ ಜಗ್ಗೇಶ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನವಿರಾಗಿ ಸಿದ್ಧಪಡಿಸಿರುವ ನವರಸದೌತಣವನ್ನು ಏಪ್ರಿಲ್ 28, 2023ರಂದು ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಉಣಬಡಿಸಲಿದ್ದೇವೆ. ವಯಸ್ಸು ಕೈ ಜಾರಿದೆ, ಕೈ ಹಿಡಿಯಲು ಒಂದು ವಧು ಬೇಕಿದೆ” ಎಂದು ಹೊಂಬಾಳೆ ಫಿಲಂಸ್ ಟ್ವೀಟ್ ಮಾಡಿದೆ.

ಅಡುಗೆ ಬಾಣಸಿಗರೊಬ್ಬರ ಕಥಾನಕವನ್ನು ಹೊಂದಿರುವ ರಾಘವೇಂದ್ರ ಸ್ಟೋರ್ಸ್ ಚಿತ್ರವನ್ನು ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್ ಬ್ಯಾನರ್ ನಡಿ ವಿಜಯ್ ಕಿರಗಂದೂರು ಅವರು ನಿರ್ಮಾಣ ಮಾಡಿದ್ದಾರೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷದ ಆಗಸ್ಟ್ ನಲ್ಲೇ ಈ ಚಿತ್ರ ಬಿಡುಗಡೆ ಆಗಬೇಕಿತ್ತು. ಆದರೆ ಹಲವು ಕಾರಣದಿಂದ ಚಿತ್ರ ಬಿಡುಗಡೆ ಮುಂದೂಡಲಾಗಿತ್ತು. ಇದೀಗ ಕೊನೆಗೂ ರಾಘವೇಂದ್ರ ಸ್ಟೋರ್ಸ್ ನಲ್ಲಿ ನವರಸಗಳ ಪಾಕ ಸವಿಯಲು ಮುಹೂರ್ತ ಫಿಕ್ಸ್ ಆಗಿದೆ.


Spread the love

About Laxminews 24x7

Check Also

ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ನಾಳೆಯಿಂದಲೇ ಕಬ್ಬು ನುರಿಸಲು ಅನುಮತಿ ನೀಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್​ ಹೇಳಿದ್ದಾರೆ.

Spread the loveಬೆಂಗಳೂರು : ದಾವಣಗೆರೆ ಸೇರಿದಂತೆ ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ಅ. 20 ರಿಂದಲೇ ಕಬ್ಬು ಕ್ರಷಿಂಗ್‌ ಆರಂಭಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ