Breaking News

ಬಳ್ಳಾರಿಯಲ್ಲಿ ರಾಮುಲು ಸ್ಪರ್ಧೆಯಿಂದ ನನಗೆ ಆನೆ ಬಲ

Spread the love

ದಾವಣಗೆರೆ: ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಶ್ರೀರಾಮುಲು ಸ್ಪರ್ಧೆ ಮಾಡುವುದಾಗಿ ಹೇಳಿರುವುದರಿಂದ ನನಗೆ ಆನೆ ಬಲ ಬಂದಿದೆ. ನನ್ನ ಕ್ಷೇತ್ರದ ಪಕ್ಕದಲ್ಲೇ ಶ್ರೀರಾಮುಲು ಇರುವುದರಿಂದ ಅನುಕೂಲ ಆಗಲಿದೆ ಎಂದು ಬಿಜೆಪಿ ಶಾಸಕ ಜಿ. ಸೋಮಶೇಖರ ರೆಡ್ಡಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಡೂರಿನಲ್ಲಿ ಸ್ಪರ್ಧಿಸುವುದಾಗಿ ಶ್ರೀರಾಮುಲು ಹೇಳಿರಲಿಲ್ಲ. ಪಕ್ಷವನ್ನು ಇನ್ನಷ್ಟು ಬಲಪಡಿಸಲು ಅಮಿತ್‌ ಶಾ ಕಾರ್ಯಕ್ರಮ ಸಂಡೂರಿನಲ್ಲಿ ಆಯೋಜಿಸಲಾಗಿತ್ತು. ಜನಾರ್ದನ ರೆಡ್ಡಿ ಪಕ್ಷಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ. ನಮ್ಮದು ಕಮಿಟ್‌ಮೆಂಟ್‌ ಆಗುವ ಕುಟುಂಬವೇ ಅಲ್ಲ.

ಬಳ್ಳಾರಿಯಲ್ಲಿ ನನ್ನ ಸಹೋದರ ಜನಾರ್ದನ ರೆಡ್ಡಿ ಪತ್ನಿ ಸ್ಪರ್ಧೆ ಮಾಡುತ್ತಿದ್ದಾರೆ. ಕೌಟುಂಬಿಕ ಸಂಬಂಧವೇ ಬೇರೆ, ರಾಜಕಾರಣವೇ ಬೇರೆ. ಕರುಣಾಕರ ರೆಡ್ಡಿ ನಮ್ಮೊಂದಿಗೇ ಇದ್ದಾರೆ. ಜನಾರ್ದನ ರೆಡ್ಡಿ ಪತ್ನಿ ಸ್ಪರ್ಧೆಯಿಂದ ನನಗೆ ಯಾವುದೇ ತೊಂದರೆ ಇಲ್ಲ. ಅಖಂಡ ಬಳ್ಳಾರಿ ಜಿಲ್ಲೆಯ ಎಲ್ಲ 10 ಕ್ಷೇತ್ರದಲ್ಲೂ ಗೆಲುವು ಸಾಧಿಸುತ್ತೇವೆ. ನೂತನ ವಿಜಯನಗರ, ಬಳ್ಳಾರಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳು ಬಿಜೆಪಿ ಭದ್ರಕೋಟೆಯಾಗಿವೆ ಎಂದರು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ