Breaking News

ಹುಬ್ಬಳ್ಳಿಯಲ್ಲಿ ಮಾ.19ಕ್ಕೆ ವಿಪ್ರ ಮಹಾ ಸಮಾವೇಶ-2023

Spread the love

ಹುಬ್ಬಳ್ಳಿ: ‘ವಿಪ್ರ ಮಹಾ ಸಮಾವೇಶ-2023’ ಹುಬ್ಬಳ್ಳಿಯ ಗೋಕುಲ ರಸ್ತೆಯ ಗೋಕುಲ ಗಾರ್ಡನ್‌ನಲ್ಲಿ ಮಾರ್ಚ್‌ 19ರಂದು ನಡೆಯಲಿದೆ ಎಂದು ವಿಪ್ರ ಸೇವಾ ಟ್ರಸ್ಟಿನ ಅಧ್ಯಕ್ಷ ಲಕ್ಷ್ಮಣ ಕುಲಕರ್ಣಿ ಹೇಳಿದರು.

ಶುಕ್ರವಾರ ಪ‍ತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಪಂಗಡದ ಹಂಗಿಲ್ಲದೆ ಸಮಸ್ತ ವಿಪ್ರ ಸಮುದಾಯ ಒಂದು ಎಂಬ ಸಂದೇಶ ನೀಡುವುದು, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಪ್ರಾತಿನಿಧ್ಯಕ್ಕೆ ಹಕ್ಕೊತ್ತಾಯ ಮಾಡುವುದು ಸಮಾವೇಶದ ಮುಖ್ಯ ಉದ್ದೇಶವಾಗಿದೆ.

ಈ ಬಗ್ಗೆ ಸಮಾವೇಶದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಧಾನಸಭಾ ಚುನಾವಣೆಯಲ್ಲಿ 12ರಿಂದ 14 ಕ್ಷೇತ್ರಗಳಲ್ಲಿ ಸಮಾಜದವರಿಗೆ ಟಿಕೆಟ್ ನೀಡಬೇಕು. ಸ್ಥಳೀಯ ಸಂಸ್ಥೆಗಳಲ್ಲಿಯೂ ಶೇ10ರಷ್ಟು ರಾಜ್ಯಕೀಯ ಪ್ರಾತಿನಿಧ್ಯ ಸಿಗಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬೆಳಿಗ್ಗೆ 10 ಗಂಟೆಗೆ ಸಮಾವೇಶ ಉದ್ಘಾಟಿಸುವರು. ಸಚಿವರಾದ ಹಾಲಪ್ಪ ಆಚಾರ್, ಶಂಕರ ಪಾಟೀಲಮುನೇನಕೊಪ್ಪ, ಶಾಸಕರಾದ ಜಗದೀಶ ಶೆಟ್ಟರ್‌, ಪ್ರಸಾದ್ ಅಬ್ಬಯ್ಯ, ಆರ್‌.ವಿ. ದೇಶಪಾಂಡೆ, ಅಮೃತ ದೇಸಾಯಿ, ಕುಸುಮಾವತಿ ಶಿವಳ್ಳಿ, ವಿಧಾನಪರಿಷತ್ ಸದಸ್ಯರಾದ ಪ್ರದೀಪ ಶೆಟ್ಟರ್‌, ಎಸ್‌.ವಿ. ಸಂಕನೂರ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ, ಉಪ ಮೇಯರ್ ಉಮಾ ಮುಕುಂದ, ನಿವೃತ್ತ ನ್ಯಾಯಮೂರ್ತಿ ಎನ್. ಕುಮಾರ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ಅಧ್ಯಕ್ಷ ಅಶೋಕ ಹಾರನಹಳ್ಳಿ ಅತಿಥಿಗಳಾಗಿ ಆಗಮಿಸುವರು. ನೇತ್ರ ತಜ್ಞ ಡಾ. ಎಂ.ಎಂ. ಜೋಶಿ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ವಿವಿಧ ಗೋಷ್ಠಿ, ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿರುವರು ಎಂದರು.

ವಿಶ್ವ ವಿಪ್ರ ಸೇವಾ ಟ್ರಸ್ಟಿನ ಉಪಾಧ್ಯಕ್ಷೆ ಭಾಗ್ಯಶ್ರೀ ಹುದ್ದಾರ, ಕಾರ್ಯದರ್ಶಿ ಪವನ ದೇಸಾಯಿ, ಖಜಾಂಚಿ ಎಚ್‌. ಮುರಳೀಧರ, ಸಂಚಾಲಕ ಸತೀಶ ಹುದ್ದಾರ, ಮುಖಂಡರಾದ ದತ್ತಮೂರ್ತಿ ಕುಲಕರ್ಣಿ ಇದ್ದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ