Breaking News

ಜುಲೈನಲ್ಲಿ ಕಾವೇರಿ 2.0 ಸಂಪೂರ್ಣ ಜಾರಿ: ಏಪ್ರಿಲ್, ಮೇ, ಜೂನ್‌ನಲ್ಲಿ ಎಲ್ಲೆಡೆ ಅನುಷ್ಠಾನ

Spread the love

ಬೆಂಗಳೂರು :ರಾಜ್ಯದಲ್ಲಿನ ಉಪ ನೋಂದಣಿ ಕಚೇರಿಗಳಲ್ಲಿ ಜೂ.30ರ ಒಳಗೆ ಕಾವೇರಿ 2.0 ತಂತ್ರಾಂಶ ಸಂಪೂರ್ಣ ಜಾರಿ ಮಾಡಲು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಯೋಜನೆ ರೂಪಿಸಿದೆ. ರಾಜ್ಯದ 292 ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕಾವೇರಿ 2.0 ಸಾಫ್ಟ್​ವೇರ್​ ಜಾರಿ ಕುರಿತು ದಿನಾಂಕ ನಿಗದಿ ಮಾಡಿದ್ದು, ಎರಡು ವಾರಗಳ ಕಾಲ ಪ್ರಯೋಗಿಕವಾಗಿ 35 ಜಿಲ್ಲೆಗಳಲ್ಲಿ (ಸಬ್ ರಿಜಿಸ್ಟ್ರಾರ್ ದಾಖಲೆಯಂತೆ) ಜೂನ್ ಅಂತ್ಯದವರೆಗೂ ಹಂತಹಂತವಾಗಿ ಜಾರಿಗೆ ತರಲಾಗುತ್ತದೆ.

ಇದರಲ್ಲಿನ ಸಾಧನ-ಬಾಧಕಗಳನ್ನು ಅಧ್ಯಯನ ನಡೆಸಿ ಲೋಪದೋಷಗಳನ್ನು ಸರಿಪಡಿಸಲಾಗುತ್ತದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೊಡ್ಡಬಳ್ಳಾಪುರ ಸಬ್ ರಿಜಿಸ್ಟ್ರಾರ್‌ನಲ್ಲಿ ಅಧಿಕೃತವಾಗಿ ಜಾರಿಗೆ ತರಲು ನಿರ್ಧರಿಸಲಾಗುತ್ತದೆ. ಈಗಾಗಲೆ ಪ್ರಯೋಗಿಕವಾಗಿ ಚಿಂಚೋಳಿ, ಬೆಳಗಾವಿ ಮತ್ತು ಮಂಡ್ಯ ಸಬ್‌ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕಾವೇರಿ 2.0 ತಂತ್ರಾಂಶ ಅಳವಡಿಕೆ ಮಾಡಲಾಗಿದೆ. ಇದರ ಜತೆಗೆ ಎಲ್ಲ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಲಿಫ್ಟ್​-ಶೌಚಗೃಹ ಸೇರಿ ಎಲ್ಲ ಮೂಲಸೌಕರ್ಯ ಕಲ್ಪಿಸಲಾಗುತ್ತದೆ. ಕಾವೇರಿ-2 ಹೊಸ ತಂತ್ರಾಂಶ ಸೇವೆಯಿಂದ ನೋಂದಣಿಗೆ ಬರುವ ಜನರು ಸಮಯ ನಿಗದಿ ಮಾಡಿಕೊಂಡು ಸಬ್ ರಿಜಿಸ್ಟ್ರಾರ್ ಕಚೇರಿಗೆ ಬಂದು ಕೆಲವೇ ನಿಮಿಷಗಳಲ್ಲಿ ಸೇವೆ ಪಡೆಯಬಹುದು. ಪಾಸ್‌ಪೋರ್ಟ್ ಸೇವೆ ಮಾದರಿ ಆಸ್ತಿ ನೋಂದಣಿ ಪ್ರಕ್ರಿಯೆ ನಡೆಯಲಿದೆ. ಜುಲೈನಲ್ಲಿ ಎಲ್ಲ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕಾವೇರಿ 2.0 ಜಾರಿಗೆ ತರಬೇಕೆಂಬ ಉದ್ದೇಶದಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳು ಪಣತೊಟ್ಟಿದ್ದಾರೆ.

ಅತ್ಯಂತ ಸರಳ ಸಾಫ್ಟ್​ವೇರ್

ಜುಲೈನಲ್ಲಿ ಎಲ್ಲ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕಾವೇರಿ 2.0 ತಂತ್ರಾಂಶ ಜಾರಿಗೆ ತರಲಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿ, ಸಿಬ್ಬಂದಿ, ವಕೀಲರು, ಸಾರ್ವಜನಿಕರು ಸೇರಿದಂತೆ ಸಂಬಂಧಪಟ್ಟವರಿಗೆ ಹಂತ ಹಂತವಾಗಿ ಕಾರ್ಯಾಗಾರ ನಡೆಸಿ ಕಾವೇರಿ 2.0 ಕುರಿತು ಅರಿವು ಮೂಡಿಸಲಾಗುತ್ತದೆ. ಹೊಸ ಸೇವೆ ಆರಂಭದಲ್ಲಿ ಕಷ್ಟ ಎನಿಸಿದರೂ ಇದು ಮೊದಲಿಗಿಂತ ಜನಸ್ನೇಹಿ ಸೇವೆಯಾಗಿದೆ. ಪ್ರತಿಯೊಬ್ಬರು ಸಹಕರಿಸಬೇಕೆಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತೆ ಡಾ.ಬಿ.ಆರ್. ಮಮತಾ ತಿಳಿಸಿದ್ದಾರೆ.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ