ಬಳ್ಳಾರಿ: ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಸಿದ್ದರಾಮಯ್ಯನವರಿಗೆ ಕೋಲಾರದಿಂದ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ಕೋಲಾರ, ವರುಣಾ ಮಾತ್ರವಲ್ಲ ಯಾವ ಕ್ಷೇತ್ರದಿಂದಲೂ ಸಿದ್ದರಾಮಯ್ಯ ಈ ಬಾರಿ ಗೆಲ್ಲಲ್ಲ. ಚಾಮುಂಡೇಶ್ವರಿ ಕ್ಷೇತ್ರದಿಂದ ಜನ ಅವರನ್ನು ಸೋಲಿಸಿದರು. ಬಾದಮಿಯಿಂದ ಜನ ಓಡಿಸಿದ್ದಾರೆ. ಹೀಗಾಗಿ ರಾಜ್ಯದ ಯಾವ ಭಾಗದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೂ ಸೋಲುತ್ತಾರೆ. ಅವರು ಪಾಕಿಸ್ತಾನ, ಅಪ್ಘಾನಿಸ್ತಾನಕ್ಕೆ ಹೋಗಿ ಸ್ಪರ್ಧಿಸಿದರೆ ಅಲ್ಲಿ ಗೆಲ್ಲಬಹುದು ಎಂದು ವ್ಯಂಗವಾಡಿದರು.
ಈಗಾಗಲೇ ಜನರು ಕಾಂಗ್ರೆಸ್ ಆಡಳಿತಕ್ಕೆ ಬೇಸತ್ತು ಬದಲಾವಣೆ ಬಯಸಿದ್ದಾಗಿದೆ. ಆದರೂ ಅಧಿಕರದ ರುಚಿ ನೋಡುವ ಕನಸನ್ನು ಕಾಣುತ್ತಿದ್ದಾರೆ. ಕಾಂಗ್ರೆಸ್ ಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬಿಟ್ಟರೆ ಮೂರನೇ ಲೀಡರ್ ಇಲ್ಲ ಎಂದು ವಾಗ್ದಾಳಿ ನಡೆಸಿದರು.
Laxmi News 24×7