Home / ಜಿಲ್ಲೆ / ಬೆಂಗಳೂರು / ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ನ ಇಬ್ಬರು ಅಧಿಕಾರಿಗಳು

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ನ ಇಬ್ಬರು ಅಧಿಕಾರಿಗಳು

Spread the love

ಬೆಂಗಳೂರು: ಪವರ್ ಸಪ್ಲೈ ಅಪ್ ಗ್ರೇಡ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಬೆಸ್ಕಾಂ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬಂಧಿತ ಅಧಿಕಾರಿಗಳನ್ನು ಸುಮನಹಳ್ಳಿ ಬೆಸ್ಕಾಂ ಎಇಇ ಭಾರತಿ ಹಾಗೂ ಎಇ ಕುನಾಲ್ ಕುಮಾರ್ ಎಂದು ಗುರುತಿಸಲಾಗಿದೆ. ಪವರ್ ಸಪ್ಲೈಗಾಗಿ ಅನಂತರಾಜು ಎಂಬುವವರು ಅರ್ಜಿ ಸಲ್ಲಿಸಿದ್ದರು. ಕೆಲಸ ಮಾಡಿಕೊಡಲು 25 ಸಾವಿರ ರೂಪಾಯಿ ಹಣ ನೀಡುವಂತೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಅನಂತರಾಜು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಅಧಿಕಾರಿಗಳಿಬ್ಬರೂ ಸಿಕ್ಕಿ ಬಿದ್ದಿದ್ದಾರೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ