ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಯುವ ಸಾಮ್ರಾಟ ದಿವಂಗತ ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬ ಇಂದು ಆಗಿದ್ದು, ಇದೇ ದಿನ ಸಹೋದರ ಧ್ರುವ ಸರ್ಜಾರ ಹೊಸ ಸಿನಿಮಾದ ಸ್ಕ್ರಿಪ್ಟ್ ಪೂಜೆ ನೆರವೇರಿದೆ.
ಬೆಂಗಳೂರಿನ ಬಸವೇಶ್ವರ ನಗರದಲ್ಲಿರೋ ಗಣಪತಿ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ ನೆರೆವೇರಿಸಿದ್ದಾರೆ. ಅಣ್ಣನ ಹುಟ್ಟಿದ ದಿನವನ್ನ ಧ್ರುವ ಹೊಸ ಸಿನಿಮಾ ಅನೌನ್ಸ್ ಮಾಡುವ ಮೂಲಕ ಆಚರಿಸಿದ್ದಾರೆ.
ಧ್ರುವ ಹೊಸ ಸಿನಿಮಾಗೆ ನಂದಕಿಶೋರ್ ನಿರ್ದೇಶನ ಮಾಡಿದ್ದಾರೆ. ಈ ಮೂಲಕ ಪೊಗರು ಚಿತ್ರದ ಬಳಿಕ ಮತ್ತೊಮ್ಮೆ ಧ್ರುವ ಹಾಗೂ ನಂದಕಿಶೋರ್ ಜೊತೆಯಾಗಿದ್ದಾರೆ. ಈ ಚಿತ್ರ ಉದಯ್ ಕೆ ಮೆಹ್ತಾ ನಿರ್ಮಾಣದಲ್ಲಿ ಮೂಡಿ ಬರಲಿದೆ
Laxmi News 24×7