Breaking News

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಯುವಕನೊಬ್ಬ ಆಜಾನ್ ಕೂಗಿದ

Spread the love

ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಯುವಕನೊಬ್ಬ ಆಜಾನ್ ಕೂಗಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಜಾನ್ ಬಗ್ಗೆ ನೀದಿದ್ದ ಹೇಳಿಕೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಈ ವೇಳೆ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಆಜಾನ್ ಕೂಗಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ.

ಯುವಕ ಆಜಾನ್ ಕೂಗುತಿದ್ದಂತೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಆಜಾನ್ ಬಗ್ಗೆ ಮಾತನಾಡಲು ಈಶ್ವರಪ್ಪ ಯಾರು? ಇವತ್ತು ಇಲ್ಲಿ ಕೂಗಿದ್ದೇವೆ. ನಾಳೆ ವಿಧಾನಸೌಧದ ಮೇಲೆ ಆಜಾನ್ ಕೂಗುತ್ತೇವೆ ಎಂದು ಮತ್ತೋರ್ವ ಯುವಕ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಈ ವೇಳೆ ಮುಸ್ಲಿಂ ಮುಖಂಡರೇ ಯುವಕರಿಗೆ ಬೈದು ಬುದ್ಧಿ ಹೇಳಿದ್ದಾರೆ. ಡಿಸಿ ಕಚೇರಿಯಲ್ಲಿ ನಿಂತು ಆಜಾನ್ ಕೂಗಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ