ಬೆಳಗಾವಿ: ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಕಣಬರಗಿ ಚೆಕ್ ಪೋಸ್ಟ್ ನಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡವು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1.77 ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಿದೆ.
ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣಾ ಸಂದರ್ಭದಲ್ಲಿ ನಗದು ಪತ್ತೆಯಾಗಿರುತ್ತದೆ. ಸದರಿ ಹಣವನ್ನು ಜಿಲ್ಲಾ ಖಜಾನೆಯಲ್ಲಿ ಜಮೆ ಮಾಡಲಾಗಿದ್ದು, ಪಂಚಾಯತ ಮುಖ್ಯ ಕಾರ್ಯನಿರ್ವಾಹಕರು ಅಧ್ಯಕ್ಷರಾಗಿರುವ ತ್ರಿಸದಸ್ಯ ಸಮಿತಿಗೆ ಪ್ರಕರಣವನ್ನು ವರ್ಗಾಯಿಸಲಾಗಿರುತ್ತದೆ.
ಚುನಾವಣಾಧಿಕಾರಿ ಅಕ್ರಮ್ ಇಂಫಾಲ್, ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ, ಎಫ.ಎಸ್.ಟಿ. ತಂಡದ ಮುಖ್ಯಸ್ಥ ಪ್ರವೀಣ ಕೊರಬು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
Laxmi News 24×7