Breaking News

ಮನನೊಂದು ನೇಣು ಬಿಗಿದುಕೊಂಡ 13ರ ಬಾಲಕಿ!

Spread the love

ಕೊಡಗು: ಒಂದು ವಾರದಿಂದ ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡ್ಲಿಪೇಟೆ ಸಮಿಪದ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. 13 ವರ್ಷದ ವೈಷ್ಣವಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ.

 

 

ಕೊಡ್ಲಿಪೇಟೆ ಸಮಿಪದ ಶಿವರಳ್ಳಿ ಗ್ರಾಮದ ಜಿತೇಂದ್ರ-ಅಕ್ಷತ ದಂಪತಿ ಪುತ್ರಿ ವೈಷ್ಣವಿ ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ವ್ಯಾಸಾಂಗ ಮಾಡುತಿದ್ದಳು. ಕಳೆದ ಒಂದು ವಾರದಿಂದ ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿದ್ದಳು.

ವಿದ್ಯಾರ್ಥಿನಿ ವೈಷ್ಣವಿ ಶನಿವಾರ ಸಂಜೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ