Breaking News
Home / ಜಿಲ್ಲೆ / ಚಿತ್ರದುರ್ಗ / ರಾಜ್ಯದ ರೈತರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ : ಸಿಎಂ ಬೊಮ್ಮಾಯಿ

ರಾಜ್ಯದ ರೈತರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ : ಸಿಎಂ ಬೊಮ್ಮಾಯಿ

Spread the love

ಚಿತ್ರದುರ್ಗ : ರೈತ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರದಿಂದ 10 ಹೆಚ್ ಪಿ ವರೆಗೆ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹೊಳಲ್ಕೆರೆ ಪಟ್ಟಣದಲ್ಲಿ ಭಾನುವಾರ ಹೊಳೆಲ್ಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

 

ಸರ್ಕಾರದಿಂದ 10 ಹೆಚ್.ಪಿ. ವರೆಗೆ ರೈತರಿಗೆ ಉಚಿತ ವಿದ್ಯುತ್, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ರೂ.6 ಸಾವಿರ ಸಹಾಯಧನಕ್ಕೆ ರಾಜ್ಯ ಸರ್ಕಾರದಿಂದ 4 ಸಾವಿರ ಅನುದಾನ ನೀಡಿ ರೂ.10 ಸಾವಿರ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಸ್ತ್ರೀ ಸಾಮಥ್ರ್ಯ ಯೋಜನೆ ಅಡಿ ಸ್ವ ಸಹಾಯ ಸಂಘಗಳಿಗೆ ಸಹಾಯಧನ, ಉಚಿತವಾಗಿ ಪಿ.ಯು.ಸಿ, ಪದವಿ ಶಿಕ್ಷಣ, ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿ ಗೊಳಿಸಲಾಗಿದೆ. ಮುಂಬರುವ ದಿನಗಳಲ್ಲಿ ಸರ್ಕಾರದಿಂದ 5 ಲಕ್ಷ ಯುವಕರಿಗೆ ಉದ್ಯೋಗ ಅವಕಾಶ ನೀಡುವ ಯೋಜನೆ ರೂಪಿಸಲಾಗಿದೆ. ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ದವಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ದುಡಿಯುವ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್, ರೈತರಿಗೆ ಜೀವವಿಮೆ, ಲಂಬಾಣಿ(ಬಂಜಾರ), ಭೋವಿ ಸೇರಿದಂತೆ ಅನೇಕ ಪರಿಶಿಷ್ಟ ವರ್ಗದ ನಿಗಮಗಳನ್ನು ಸ್ಥಾಪಿಸಲಾಗಿದೆ. ಹಿಂದುಳಿದ ವರ್ಗಗಳ ಏಳಿಗೆಗಾಗಿ ಬಜೆಟ್‍ನಲ್ಲಿ ಅಧಿಕ ಹಣ ಮೀಸಲಿಡಲಾಗಿದೆ ಎಂದರು.

ಮಧ್ಯ ಕರ್ನಾಟಕದ ಬರದ ನಾಡನ್ನು ಹಸಿರಾಗಿಸಲು ಭದ್ರಾ ಮೇಲ್ದಂಡೆ ಯೋಜನೆಯನ್ನು ಶಂಕುಸ್ಥಾಪನೆ ಮಾಡಿದ್ದು ನಾವೇ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುತ್ತಿರುವುದು ನಾವೇ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ ಹಾಗೂ ನಾವೇ ಆಗಮಿಸಿ ಉದ್ಘಾಟನೆಯನ್ನು ಕೂಡ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ವೇಳೆ, ನಾನು ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ, ಅವರು ಕೈಗೊಂಡ ದಿಟ್ಟ ನಿಲುವಿನಿಂದಾಗಿ, ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಭದ್ರಾ ಮೇಲ್ದಂಡೆ ಯೋಜನೆ ರೂಪಿಸಿ, ಕಾಮಗಾರಿ ಆರಂಭಿಸಲಾಯಿತು. ಕೇಂದ್ರ ಸರ್ಕಾರ ಈ ಯೋಜನೆಗೆ ರೂ.5300 ಕೋಟಿಗಳ ಅನುದಾನವನ್ನು ಬಜೆಟ್‍ನಲ್ಲಿ ಮೀಸಲಿರಿಸಿದೆ. ಮಧ್ಯ ಕರ್ನಾಟಕದ ಜನರ ಭೂಮಿಗೆ ನೀರು ಕೊಟ್ಟು, ಬರದ ಭೂಮಿಯನ್ನು ಹಸಿರಾಗಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದ್ದು, ಯೋಜನೆಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲಾಗುವುದು. ಬರದ ನಾಡನ್ನು ಹಸಿರಾಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದು ನಾವೇ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುತ್ತಿರುವುದು ನಾವೇ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ ಹಾಗೂ ನಾವೇ ಆಗಮಿಸಿ ಉದ್ಘಾಟನೆಯನ್ನು ಕೂಡ ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದ 05 ಲಕ್ಷ ಸ್ತ್ರೀಸಾಮಥ್ರ್ಯ ಸಂಘಗಳಿಗೆ ಸಹಾಯಧನ ನೀಡಿ, ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ಯೋಜನೆ ಈಗಾಗಲೆ ಅನುಷ್ಠಾನಗೊಂಡಿದ್ದು, ಮಾ. 23 ರಂದು ಯುವಕರ ಸಂಘಗಳಿಗೆ ಸುತ್ತುನಿಧಿಯನ್ನು ನೀಡಿ, ಸುಮಾರು 05 ಲಕ್ಷ ಯುವಕರಿಗೆ ಉದ್ಯೋಗ ಕಲ್ಪಿಸುವ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು.

ಹೊಳಲ್ಕೆರೆ ಕ್ಷೇತ್ರದಲ್ಲಿ ಆಗುತ್ತಿರುವ ಅಭಿವೃದ್ಧಿಯೇ ರಾಜ್ಯದ ಅಭಿವೃದ್ಧಿಗೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ 6000 ಕಿ.ಮೀ. ಉದ್ದ ಹೆದ್ದಾರಿ ನಿರ್ಮಿಸಲಾಗಿದೆ. 7100 ಕೋಟಿ ವೆಚ್ಚದಲ್ಲಿ ರೈಲ್ವೇ ಸಂಪರ್ಕ ಅಭಿವೃದ್ಧಿ ಪಡಿಸಲಾಗುತ್ತದೆ. ರೈತರಿಗೆ ನೀರಾವರಿ ಕಲ್ಪಿಸಿಕೊಳ್ಳಲು ಸಬ್ಸಿಡಿ ನೀಡಲಾಗಿದೆ. ಎಸ್.ಸಿ. ಎಸ್.ಟಿ ಜನಾಂಗದವರಿಗೆ ಉಚಿತವಾಗಿ 75 ಯುನಿಟ್ ವಿದ್ಯುತ್ ನೀಡಲಾಗುತ್ತಿದೆ. ಭೂ ರಹಿತರಿಗೆ ಭೂ ಖರೀದಿಗೆ ರೂ.20 ಲಕ್ಷ ನೀಡಲಾಗುತ್ತಿದೆ. ರಾಜ್ಯದ ಜನರ ಅಭಿವೃದ್ಧಿಯ ಧ್ಯೇಯ ಹೊಂದಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ