ಖಾನಾಪುರ: ತಾಲೂಕಿನ ಪಾರಿಷ್ವಾಡ ಗ್ರಾಮದಲ್ಲಿ ಮಲಪ್ರಭಾ ನದಿ ದಂಡೆಯಲ್ಲಿ ಅಂದರ್- ಬಾಹರ್ ಆಟದಲ್ಲಿ ತೊಡಗಿದ್ದ ಎಂಟು ಜನ ಆರೋಪಿತರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ.
ಖಚಿತ ಮಾಹಿತಿ ಮೇರೆಗೆ ಖಾನಾಪುರ ಪೊಲೀಸ್ ಠಾಣೆ ಪಿಎಸ್ಐ ಪ್ರಕಾಶ ರಾಠೋಡ ಅವರು ಬೈಲಹೊಂಗಲ ಡಿಎಸ್ಪಿ ರವಿ ಡಿ.ನಾಯ್ಕ, ಖಾನಾಪುರ ಪಿಐ ರಾಮಚಂದ್ರ ನಾಯಕ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ 8 ಜನರನ್ನು ವಶಕ್ಕೆ ಪಡೆದರು.ಆರೋಪಿತರಿಂದ ಹಣ ಹಾಗೂ ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ.
 Laxmi News 24×7
Laxmi News 24×7
				 
		 
						
					 
						
					 
						
					