Breaking News

ಬೆಂಗಳೂರು: ಕಾಂಗ್ರೆಸ್‌ 4 ನೇ ಗ್ಯಾರಂಟಿ ಘೋಷಣೆ, ಯುವನಿಧಿ ಮೂಲಕ ನಿರುದ್ಯೋಗಿಗಳಿಗೆ ಆರ್ಥಿಕ ನೆರವು

Spread the love

ಬೆಂಗಳೂರು: ಕಾಂಗ್ರೆಸ್‌ ಪಕ್ಷ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದು, ವಿವಿಧ ಯೋಜನೆಗಳ ಮೂಲಕ ಪ್ರತಿ ವರ್ಗದ ಜನರ ಮನಗೆಲ್ಲಲು ಮುಂದಾಗಿದೆ. ಇದೀಗ ಕಾಂಗ್ರೆಸ್‌ 4ನೇ ಗ್ಯಾರಂಟಿ ಯೋಜನೆ ಘೋಷಿಸಿದೆ. ನಿರುದ್ಯೋಗಿ ಪದವಿಧರರಿಗೆ 3000 ರೂ.

ಹಾಗೂ ಡಿಪ್ಲೊಮಾ ಪ್ರತಿತಿಂಗಳು 1500 ರೂ. ನಿರುದ್ಯೋಗ ಭತ್ಯೆ ಘೋಷಿಸಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಯುವ ಕ್ರಾಂತಿ ಸಮಾವೇಶದಲ್ಲಿ ರಾಹುಲ್‌ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಯುವನಿಧಿ ಹೆಸರಿನ ಗ್ಯಾರಂಟಿ ಕಾರ್ಡ್‌ ಬಿಡುಗಡೆ ಮಾಡಿದರು.

ಈಗಾಗಲೇ ಮೂರು ಗ್ಯಾರಂಟಿಯನ್ನು ಘೋಷಿಸಿರುವುದನ್ನು ಸ್ಮರಿಸಬಹುದು. ಪ್ರತಿ ಕುಟುಂಬಕ್ಕೆ ಹತ್ತು ಕೆಜಿ ಅಕ್ಕಿ, 200 ಯೂನಿಟ್‌ ಉಚಿತ ವಿದ್ಯುತ್‌, ಕುಟುಂಬದ ಓರ್ವ ಮಹಿಳೆಗೆ 2000 ಸಾವಿರ ರೂ ನೀಡಲಾಗುವುದು ಎಂದು ಗ್ಯಾರಂಟಿ ಘೋಷಣೆ ಮಾಡಿರುವುದನ್ನು ಸ್ಮರಿಸಬಹುದು.


Spread the love

About Laxminews 24x7

Check Also

ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು

Spread the loveಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್​ 1 ರಿಂದ ಜಿಲ್ಲೆಯಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ