Breaking News

ಮಂಗಳೂರು: ಮಾ.21ರಿಂದ ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ

Spread the love

ಮಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾ.21ರಿಂದ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಮಳೆ?

ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಬೀದರ್, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ.

 

ಕಳೆದ ಭಾನುವಾರದಂದು ಮೈಸೂರು, ತುಮಕೂರು,ಉಡುಪಿ, ಬಳ್ಳಾರಿ, ಚಾಮರಾಜನಗರ ಜಿಲ್ಲೆಯ ಕೆಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಮಲ್ಲಿಗೆಯಂತೆ ನೆಲದಲ್ಲಿ ಹರಡಿದ ರಾಶಿ ರಾಶಿ ಆಲಿಕಲ್ಲನ್ನು ಕಂಡ ಜನರು ಕರ್ನಾಟಕ ಕಾಶ್ಮೀರದಂತಾಗಿದೆ ಎಂದು ಹೇಳುತ್ತಿದ್ದರು. ಈ ಬೆನ್ನಲ್ಲೇ ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ