Breaking News

ಈ ಬಾರಿ ಕರ್ನಾಟಕ ರಾಜ್ಯೋತ್ಸವವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ,ಕರಾಳ ದಿನಕ್ಕೆ ಅವಕಾಶವಿಲ್ಲ

Spread the love

ಬೆಳಗಾವಿ – : ಕೋವಿಡ್ -19 ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ ಮಾಡಲಾಗುವುದು. ರಾಜ್ಯೋತ್ಸವದಲ್ಲಿ ಪೋಲಿಸ್ ಪರೇಡ್ ಗೆ ಮಾತ್ರ ಅವಕಾಶವಿದ್ದು, ಯಾವುದೇ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಅ.17) ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದ ಸಿ.ಪಿ.ಎಡ್ ಮೈದಾನದಲ್ಲಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ನಗರದ ಚೆನ್ನಮ್ಮ ವೃತ್ತದಲ್ಲಿರುವ ಚನ್ನಮ್ಮನ ಪುತ್ಥಳಿಗೆ ಜಿಲ್ಲಾಡಳಿತ ವತಿಯಿಂದ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಗುವುದು ಎಂದು ಹೇಳಿದರು.

ಈ ಬಾರಿ ಯಾವುದೇ ಕಾರಣಕ್ಕೂ ಕರಾಳ ದಿನ ಆಚರಿಸಲು ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕನ್ನಡ ರಾಜ್ಯೋತ್ಸವ ಕಳೆಗುಂದದಿರಲಿ:

ಹಿರಿಯ ಕನ್ನಡಪರ ಹೋರಾಟಗಾರರಾದ ಅಶೋಕ ಚಂದರಗಿ ಅವರು, ನಗರದಲ್ಲಿನ ಅಂಗಡಿ ಮುಂಗಟ್ಟುಗಳ ಫಲಕಗಳು ಕನ್ನಡ ಭಾಷೆಯಲ್ಲಿ ಕಡ್ಡಾಯವಾಗಿ ಬರೆಯಬೇಕು ಇಲ್ಲವಾದರೆ ಅಂತಹ ಅಂಗಡಿ ಮುಂಗಟ್ಟುಗಳ ಪರವಾನಿಗೆ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಪೋಲಿಸ್ ಇಲಾಖೆಯು ಸಾರ್ವಜನಿಕರಿಗೆ ವಿಧಿಸುವ ದಂಡಗಳ ಆದೇಶ ಮತ್ತು ವಸೂಲಾತಿ ರಶೀದಿ ಕನ್ನಡ ಭಾಷೆಯಲ್ಲಿ ಮುದ್ರಿಸಬೇಕು ಎಂದು ಪೊಲೀಸ್ ಆಯುಕ್ತರಿಗೆ ಚಂದರಗಿ‌ ಮನವಿ ಮಾಡಿಕೊಂಡರು.

ಕರಾಳ ದಿನಾಚರಣೆಗೆ ಅನುಮತಿ‌ ಬೇಡ:

ಕನ್ನಡ ರಾಜ್ಯೋತ್ಸವ ದಿನದಂದು ಕೆಲ ಸಂಘಟನೆಗಳು ಕರಾಳ ದಿನಾಚರಣೆ ಆಚರಿಸಲು ಮುಂದಾಗಿದ್ದು, ಯಾವುದೇ ಕಾರಣಕ್ಕೂ ಅದಕ್ಕೆ ಅನುಮತಿ ನೀಡಬಾರದು ಎಂದು ಎಲ್ಲ ಕನ್ನಡ ಸಂಘಟನೆಗಳ ಪರವಾಗಿ ಅಶೋಕ ಚಂದರಗಿ ಮನವಿ ಮಾಡಿಕೊಂಡರು.

ಪ್ರತಿ ವರ್ಷ ಕರಾಳ ದಿನಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಲಾಗುತ್ತದೆ. ಆದರೆ ನಂತರದಲ್ಲಿ ಅವಕಾಶ ನೀಡಲಾಗುತ್ತದೆ. ಅದು ಆಗಬಾರದು ಎಂದು ಕನ್ನಡ ಸಂಘಟನೆಗಳು ಆಗ್ರಹಿಸಿದವು.
ಮಹಾಂತೇಶ ರಣಗಟ್ಟಿಮಠ ಸೇರಿದಂತೆ ಹಲವಾರು ಕನ್ನಡ ಹೋರಾಟಗಾರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ