Breaking News
Home / ರಾಜಕೀಯ / ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರ: ವರಿಷ್ಠರ ತೀರ್ಮಾನದಂತೆ ನಡೆಯುತ್ತೇನೆ; ವಿನಯ್ ಕುಲಕರ್ಣಿ

ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರ: ವರಿಷ್ಠರ ತೀರ್ಮಾನದಂತೆ ನಡೆಯುತ್ತೇನೆ; ವಿನಯ್ ಕುಲಕರ್ಣಿ

Spread the love

ಬೆಳಗಾವಿ: ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರ ನನ್ನದಲ್ಲ, ಹೈಕಮಾಂಡ್ ನಾಯಕರು ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ.

ಈ ಬಗ್ಗೆ ಹಲವು ಬಾರಿ ನಮ್ಮ ನಾಯಕರು ಈ ವಿಚಾರ ಹೇಳಿದ್ದಾರೆ. ನನಗೆ ಧಾರವಾಡ ಪ್ರವೇಶಕ್ಕೆ ಕುತಂತ್ರದಿಂದ ಅವಕಾಶ ನೀಡುತ್ತಿಲ್ಲ. ಸ್ಪರ್ಧೆ ನನ್ನ ಅಪೇಕ್ಷೆಯಲ್ಲ, ಅದು ಹೈಕಮಾಂಡ್ ನಿರ್ಧಾರ ಎಂದು ಹೇಳಿದರು.

ʼ

ಶಿಗ್ಗಾಂವಿಯಲ್ಲೂ ಹಲವು ಆಕಾಂಕ್ಷಿಗಳಿದ್ದಾರೆ ಅವರಿಗೆ ನೋವು ಮಾಡಿ ಸ್ಪರ್ಧೆ ಮಾಡುವ ಅವಶ್ಯಕತೆ ಇಲ್ಲ. ಪಕ್ಷದ ವರಿಷ್ಠರ ತೀರ್ಮಾನ ಏನು ಅಗಿರತ್ತದೋ ಅದರಂತೆ ನಡೆಯುತ್ತೇನೆ. ಸ್ಪರ್ಧೆ ಮಾಡದಂತೆ ಹೇಳಿದರೂ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧ. ಧಾರವಾಡದಿಂದ ಸ್ಪರ್ಧೆ ಮಾಡಬೇಡಿ ಅಂದ್ರೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ