Breaking News

ಇನ್ನು ಮುಂದೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ “ಸಿಹಿ’ಯೂ ಇರಲಿದೆ!

Spread the love

ವದೆಹಲಿ:ಇನ್ನು ಮುಂದೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ “ಸಿಹಿ’ಯೂ ಇರಲಿದೆ!

ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನುತುಪ್ಪವನ್ನೂ ಸೇರಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಸಲಹೆ ನೀಡಿದೆ.

ಜೇನುತುಪ್ಪದಲ್ಲಿರುವ ಪೋಷಕಾಂಶಗಳನ್ನು ಗಮನದಲ್ಲಿಟ್ಟುಕೊಂಡು ಹಾಗೂ ಜೇನು ಸಾಕಣೆ ಮಾಡುವವರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಸಲಹೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಎಲ್ಲ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದ್ದು, “ದೇಶದಲ್ಲಿ ಜೇನುತುಪ್ಪದ ಸೇವನೆಯನ್ನು ಹೆಚ್ಚಳ ಮಾಡುವ ಸಲುವಾಗಿ ಮತ್ತು ಜೇನುಸಾಕಣೆ ಉದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನನ್ನೂ ಸೇರಿಸಿ ಮಕ್ಕಳಿಗೆ ನೀಡಿ. ಜೇನುತುಪ್ಪದಲ್ಲಿ ಸಾಕಷ್ಟು ಪೋಷಕಾಂಶಗಳಿದ್ದು, ಮಕ್ಕಳ ಬೆಳವಣಿಗೆಗೂ ಇದು ಪೂರಕವಾಗಿರಲಿದೆ.

ಹೀಗಾಗಿ, ಪ್ರಧಾನಮಂತ್ರಿ ಪೋಷಣ್‌ ಯೋಜನೆಯಡಿ ಶಾಲಾ ಮಕ್ಕಳಿಗೆ ನೀಡುವ ಬಿಸಿಯೂಟದಲ್ಲಿ ಪ್ರತ್ಯೇಕವಾಗಿ ಜೇನುತುಪ್ಪ ನೀಡಲು ಅಥವಾ ಬೇರೆ ಬೇರೆ ಖಾದ್ಯಗಳಲ್ಲಿ ಅದನ್ನು ಸೇರಿಸಲು ಪ್ರಯತ್ನಿಸಿ’ ಎಂದು ತಿಳಿಸಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ