Breaking News

ಸಾರ್ವಜನಿಕರು ಗೂಡ್ಸ್ ವಾಹನಗಳಲ್ಲಿ ಸಂಚರಿಸಬಾರದು:ಜಿಲ್ಲಾಧಿಕಾರಿ ನಿತೇಶ್ ಪಾಟೀಲ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯವುದು ಕಂಡುಬಂದರೆ‌ ಅಂತಹ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ.

ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಚುನಾವಣಾ ಆಯೋಗ ಕೂಡ ಗಂಭೀರವಾಗಿ ಪರಿಗಣಿಸಿದೆ.

ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಮೋಟಾರು ವಾಹನ ಕಾಯ್ದೆ ಪ್ರಕಾರ ನಿಷೇಧಿಸಲಾಗಿರುತ್ತದೆ.

ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇಂದಿನಿಂದ ಜಿಲ್ಲೆಯಾದ್ಯಂತ ತೀವ್ರ ತಪಾಸಣೆ ನಡೆಸಲಿದ್ದಾರೆ. ಕಾನೂನು ಉಲ್ಲಂಘನೆ ಕಂಡುಬಂದರೆ ಕಠಿಣ ಕ್ರಮವನ್ನು ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ.

ಸುರಕ್ಷಿತ ಪ್ರಯಾಣದ ದೃಷ್ಟಿಯಿಂದ ಸಾರ್ವಜನಿಕರು ಗೂಡ್ಸ್ ವಾಹನಗಳಲ್ಲಿ ಸಂಚರಿಸಬಾರದು. ವಾಹನ ಮಾಲೀಕರು ಕೂಡ ಇದಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ