Breaking News

ಪೊಲೀಸರ ಮೇಲೇ ಹಲ್ಲೆಗೆ ಮುಂದಾದ ದರೋಡೆಕೋರರು

Spread the love

ಬೀದರ್: ಬಂಧಿಸಲು ಹೋಗಿದ್ದ ಪೊಲೀಸರ ಮೇಲೆಯೇ ದರೋಡೆಕೋರರು ಹಲ್ಲೆ ಮಾಡಲು ಮುಂದಾಗಿದ್ದು, ಬಳಿಕ ಸರ್ಕಲ್ ಪೊಲೀಸ್ ಇನ್​ಸ್ಪೆಕ್ಟರ್​ ಗುಂಡು ಹಾರಿಸಬೇಕಾದ ಪ್ರಸಂಗ ಎದುರಾಗಿತ್ತು. ಬೀದರ್​ನಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.

 

ಇಲ್ಲಿನ ಮೈಕೂರ್​ನ ರಿಂಗ್​ರೋಡ್​ನಲ್ಲಿ ಈ ಘಟನೆ ನಡೆದಿದೆ. ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖದೀಮರನ್ನು ತಮಗೆ ಸಿಕ್ಕ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಹೆಡೆಮುರಿ ಕಟ್ಟಲು ಪೊಲೀಸರು ಮುಂದಾಗಿದ್ದ ಸಂದರ್ಭದಲ್ಲಿ ಈ ಹಲ್ಲೆಯತ್ನ ನಡೆದಿದೆ.

 

ಇಬ್ಬರು ದರೋಡೆಕೋರರು ಪೊಲೀಸರ ಮೇಲೇ ಹಲ್ಲೆ ಮಾಡಲು ಬಂದಾಗ ಬೀದರ್​ ರೂರಲ್ ಸಿಪಿಐ ಮಲ್ಲಿಕಾರ್ಜುನ ಯಾತನೂರ್ ಗಾಳಿಯಲ್ಲಿ ಒಂದು ಸುತ್ತಿನ ಗುಂಡು ಹಾರಿಸಿದ್ದರು. ಬಳಿಕ ಒಬ್ಬ ಆರೋಪಿಯನ್ನು ವಶಕ್ಕೆ ಪಡೆಯಲು ಯಶಸ್ವಿಯಾಗಿದ್ದರು. ಆದರೆ ಇನ್ನೊಬ್ಬ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಪಿಎಸ್‌ಐ ನಾಗೇಂದ್ರ ಮತ್ತು ಸಿಬ್ಬಂದಿ ಕೂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ