Breaking News

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

Spread the love

ಬೆಳಗಾವಿ: ಸೂಕ್ತ ದಾಖಲಾತಿಗಳಲ್ಲದೇ ಸಾಗಿಸಲಾಗುತ್ತಿದ್ದ 9 ಲಕ್ಷ ರೂಪಾಯಿ ನಗದು ಹಣವನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ವಶಪಡಿಸಿಕೊಳ್ಳಲಾಗಿದೆ.

ಬೆಳಗಾವಿ ನಗರದಿಂದ ಅಂಕಲಗಿ ಕಡೆಗೆ ಹೊರಟಿದ್ದ ಕಾರನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ನಗದು ಪತ್ತೆಯಾಗಿದೆ.

 

ನಗದು ಹಣವು ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದೆ. ಆದರೆ ಈ ಹಣಕ್ಕೆ ಸಂಬಂಧಿಸಿದಂತೆ ಸಮರ್ಪಕ ದಾಖಲೆಗಳನ್ನು ಅವರು ಒದಗಿಸಿರುವುದಿಲ್ಲ. ಇದಲ್ಲದೇ ಹಣ ಸಾಗಾಣಿಕೆಗೆ ಸಂಬಂಧಿಸಿದಂತೆ ಇರುವ ನಿಗದಿತ ಎಸ್.ಓ.ಪಿ.ಯನ್ನು ಕೂಡ ಪಾಲಿಸದಿರುವುದು ಕಂಡುಬಂದಿದೆ.

ಈ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ನಿಯಮಾವಳಿ ಪ್ರಕಾರ ಮುಂದಿನ ಕ್ರಮವನ್ನು ತೆಗೆದುಕೊಳ್ಳುವುದಾಗಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ತಿಳಿಸಿದ್ದಾರೆ.

ಚೆಕ್ ಪೋಸ್ಟ್ ನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡದ ಕೆಲಸಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ