Breaking News

ಕಾಂಗ್ರೆಸ್‌ ಸೇರಿದ ಬಾಬೂರಾವ್ ಚಿಂಚನಸೂರಗೆ ಗುರುಮಠಕಲ್‌

Spread the love

(ಯಾದಗಿರಿ ಜಿಲ್ಲೆ): ಸೋಮವಾರ ಬಿಜೆಪಿಗೆ ಕೈಕೊಟ್ಟ ಕಲ್ಯಾಣ ಕರ್ನಾಟಕ ಭಾಗದ ವರ್ಣರಂಜಿತ ರಾಜಕಾರಣಿ, ಮಾಜಿ ಎಂಎಲ್‌ಸಿ ಬಾಬುರಾವ ಚಿಂಚನಸೂರ ಬುಧವಾರ (ಮಾ.22)ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಸಮ್ಮುಖ ಕಾಂಗ್ರೆಸ್‌ಗೆ ಅಧಿಕೃತ ಸೇರ್ಪಡೆಯಾಗಿದ್ದಾರೆ.

ಚಿಂಚನಸೂರ ಪಕ್ಷ ಸೇರ್ಪಡೆಯಿಂದ ಕ್ಷೇತ್ರದ ಟಿಕೆಟ್‌ ‘ಕೈ’ಗಿಟ್ಟಿದೆ ಎನ್ನುವ ಚರ್ಚೆಗಳು ಈಗ ಮುನ್ನೆಲೆಗೆ ಬಂದಿವೆ.

ಕೆಲ ದಿನಗಳ ಹಿಂದೆ ಬಿಜೆಪಿ ಎಂಎಲ್ಸಿ ಎನ್‌.ರವಿಕುಮಾರ್ ಜೊತೆಗೂಡಿ ಸುದ್ದಿಗೋಷ್ಠಿ ನಡೆಸಿದ್ದ ಚಿಂಚನಸೂರ ‘ಲೋಕಸಭಾ ಚುನಾವಣೆಯಲ್ಲಿ ತೊಡೆತಟ್ಟಿ ಮಲ್ಲಿಕಾರ್ಜುನ ಖರ್ಗೆಯವರನ್ನು ಸೋಲಿಸಿದ್ದೆ, ಅದರಂತೆ 2023ರ ವಿಧಾನಸಭಾ ಚುನಾವಣೆಯಲ್ಲಿ ಅವರ ಪುತ್ರ ಪ್ರಿಯಾಂಕ್ ಖರ್ಗೆಯವರನ್ನೂ ಸೋಲಿಸುತ್ತೇನೆ’ ಎಂದು ತೊಡೆತಟ್ಟಿದ್ದರು.

ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಶರಣಪ್ರಕಾಶ ಪಾಟೀಲ ಸೇಡಂ ಅವರ ಉಪಸ್ಥಿತಿಯಲ್ಲಿ ಕಾಂಗ್ರೆಸ್‌ ಸೇರುವ ಮೂಲಕ ಪಕ್ಷ ಸೇರ್ಪಡೆಯ ಕುರಿತು ಹರಿದಾಡಿದ ಹಲವು ಚರ್ಚೆಗಳಿಗೆ ತೆರೆಬಿದ್ದಿದೆ.

ಚಿಂಚನಸೂರ ‘ಕೈ’ಗೆ ಟಿಕೆಟ್‌: ಕಾಂಗ್ರೆಸ್‌ ಸೇರ್ಪಡೆಗೆ ಮುನ್ನವೇ ಪಕ್ಷದೊಂದಿಗೆ ಸಂಪೂರ್ಣ ಚರ್ಚೆ ನಡೆಸಿದ್ದ ಚಿಂಚನಸೂರ, ಗುರಮಠಕಲ್‌ ಕ್ಷೇತ್ರದ ಟಿಕೆಟ್‌ ನೀಡುವ ಭರವಸೆ ಪಡೆದೇ ಹೆಜ್ಜೆ ಮುಂದಿಟ್ಟಿದ್ದಾರೆ ಎನ್ನುವ ಚರ್ಚೆಗಳು ಬುಧವಾರ ಮಧ್ಯಾಹ್ನದಿಂದ ಹರಿದಾಡುತ್ತಿವೆ.

ಕೆಪಿಸಿಸಿ ನೀಡಿದ್ದ ಮಾರ್ಗಸೂಚಿಯಂತೆ ಗುರುಮಠಕಲ್‌ ಕ್ಷೇತ್ರದ ಟಿಕೆಟ್‌ಗಾಗಿ ಈಗಾಗಲೇ ಶ್ರೇಣಿಕುಮಾರ ದೋಖಾ, ಬಸರೆಡ್ಡಿಗೌಡ ಅನಪುರ, ಶರಣಪ್ಪ ಮಾನೇಗಾರ ಸಾಯಿಬಣ್ಣ ಬೋರಬಂಡ, ತಿಪ್ಪಣ್ಣ ಕಮಕನೂರ, ನಿತ್ಯಾನಂದ ಪೂಜಾರಿ, ಡಾ.ಉದಯಕುಮಾರ ಹಾಗೂ ಯೋಗೇಶ ಬೆಸ್ತರ್ ಸೇರಿ ಒಟ್ಟು ಎಂಟು ಜನ ಆಕಾಂಕ್ಷಿಗಳು ಅರ್ಜಿಸಲ್ಲಿಸಿದ್ದಾರೆ.

‘ಚಿಂಚನಸೂರ ಸೇರ್ಪಡೆಯ ಜೊತೆಗೆ ಟಿಕೆಟ್‌ ಕೂಡ ಪಡೆಯಲಿದ್ದಾರೆ’ ಎನ್ನುವ ಮಾತುಗಳ ಜೊತೆಗೆ ಕಾಂಗ್ರೆಸ್‌ ಟಿಕೆಟ್‌ ಯಾರಿಗೆ ನೀಡಲಿದೆ? ತಮ್ಮ ಮುಖಂಡನಿಗೆ ಟಿಕೆಟ್‌ ತಪ್ಪಿದರೆ ಮುಂದೇನು ಮಾಡುವುದು ಎನ್ನುವ ಚಿಂತನೆಗಳು ಜೋರಾಗಿವೆ.

 

 


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ