Breaking News

B.S.Y. ನಿವಾಸದ ಮೇಲೆ ಕಲ್ಲು ತೂರಾಟ;

Spread the love

ಶಿವಮೊಗ್ಗ: ಒಳಮೀಸಲಾತಿ ವಿಂಗಡಣೆಗೆ ಶಿಫಾರಸು ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಂಜಾರಾ ಸಮುದಾಯದವರು ಕರೆ ನೀಡಿರುವ ಶಿಕಾರಿಪುರ ತಾಲೂಕು ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಪ್ರತಿಭಟನಾಕಾರರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದು, ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಒಳಮೀಸಲಾತಿ ವಿಂಗಡಣೆಗೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿರುವುದನ್ನು ವಿರೋಶಿಸಿ ಇಂದು ಬಂಜಾರಾ ಸಮುದಾಯ ಶಿಕಾರಿಪುರ ತಾಲೂಕಿನಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿತ್ತು. ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದ ವೇಳೆ ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದ ಮೇಲೆ ಉದ್ರಿಕ್ತರ ಗುಂಪು ಕಲ್ಲುತೂರಾಟ ನಡೆಸಿದೆ. ಬಿಜೆಪಿಯ ಬ್ಯಾನರ್ ಗಳನ್ನು ಹರಿದು ಹಾಕಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದೆ.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಬ್ಯಾರಿಕೆಡ್ ಗಳನ್ನು ಹಾಕಿದ್ದು, ಆದರೂ ಬಗ್ಗದ ಪ್ರತಿಭಟನಾಕಾರರ ಗುಂಪು ಬ್ಯಾರಿಕೇಡ್ ಗಳನ್ನು ತಳ್ಳಿ ಯಡಿಯೂರಪ್ಪ ನಿವಾಸದತ್ತ ಮುನ್ನುಗ್ಗಲು ಯತ್ನಿಸಿದ್ದಾರೆ. ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.


Spread the love

About Laxminews 24x7

Check Also

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

Spread the love ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ