Breaking News

ಬಿಜೆಪಿ ಸಂಸದರಾಗಿದ್ದ ಪ್ರಬಲ ಪಂಚಮಸಾಲಿ ಮುಖಂಡ ಮರಳಿ ಕಾಂಗ್ರೆಸ್​ಗೆ!

Spread the love

ಹಾವೇರಿ: ಮಾಜಿ ಸಂಸದ ಮಂಜುನಾಥ್ ಕುನ್ನೂರು ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ ಮಾಡಿದ್ದು ಕೆಪಿಸಿಸಿ ಅದ್ಯಕ್ಷ ಡಿಕೆಶಿ ಹಾಗೂ ಸಿದ್ದರಾಮಯ್ಯ ಭೇಟಿಗೆ ತೆರಳಿದ್ದಾರೆ.

ಇವರು 1989 – 1994, 1994-1999 ಅವಧಿಯಲ್ಲಿ ಶಿಗ್ಗಾವಿ ಕ್ಷೇತ್ರದ ಶಾಸಕರಾಗಿದ್ದರು.

ನಂತರ 2004ರಲ್ಲಿ ಧಾರವಾಡ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿದ್ದರು. ಮುಂದೆ 2009ರಲ್ಲಿ ಕಾಂಗ್ರೆಸ್​ನಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಸಿ ಪ್ರಹ್ಲಾದ್ ಜೋಶಿ ವಿರುದ್ಧ ಸೋತಿದ್ದರು.

ನಂತರ 2018ರಲ್ಲಿ ಮತ್ತೆ ಬಿಜೆಪಿ ಸೇರಿದ್ದ ಇವರು ಇದೀಗ ವಾಪಸ್​ ಕಾಂಗ್ರೆಸ್​ಗೆ ಹೋಗುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್​, ಸಿಎಂ ಸ್ವಕ್ಷೇತ್ರದಲ್ಲಿ ಆಪರೇಷನ್ ಹಸ್ತ ಮಾಡಿದ ಹಾಗೆ ಆಗಿದೆ. ನಾಜಿ ಸಂಸದ ಮಂಜುನಾಥ್ ಕುನ್ನೂರು ಪ್ರಬಲ ಪಂಚಮಸಾಲಿ ಮುಖಂಡರೂ ಹೌದು. ಅವರೊಂದಿಗೆ, ಅವರ ಪುತ್ರ ಚಂದನ ಕುನ್ನೂರು ಕೂಡ ಕಾಂಗ್ರೆಸ್​ ಸೇರುತ್ತಿದ್ದಾರೆ.

ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗೆ ಶಿಗ್ಗಾವಿಯಲ್ಲಿ ಶಾಕ್ ನೀಡಿರುವ ಕಾಂಗ್ರೆಸ್, ಸಿಎಂ ವಿರುದ್ಧ ಪಂಚಮಸಾಲಿ ‌ಅಸ್ತ್ರ ಪಯೋಗ ಮಾಡುತ್ತಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ