Home / ಜಿಲ್ಲೆ / ಬೆಳಗಾವಿ / ಬೆಳಗಾವಿ: ಮಹಿಳಾ ಮತದಾರರ ಸಂಖ್ಯೆ ಹೆಚ್ಚಳ

ಬೆಳಗಾವಿ: ಮಹಿಳಾ ಮತದಾರರ ಸಂಖ್ಯೆ ಹೆಚ್ಚಳ

Spread the love

ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ವೀಪ್(ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ) ಸಮಿತಿ ಕೈಗೊಳ್ಳುತ್ತಿರುವ ಚಟುವಟಿಕೆಗಳ ಪರಿಣಾಮ, ಜಿಲ್ಲೆಯಲ್ಲಿ ಮತದಾರರ ಸಂಖ್ಯೆ ಹೆಚ್ಚುತ್ತಿದೆ.

 

ಕಳೆದ 4 ವರ್ಷಗಳಿಗೆ ಹೋಲಿಸಿ ದರೆ, ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. 2019ರ ಲೋಕಸಭೆ ಚುನಾವಣೆ ವೇಳೆ, ಒಂದು ಸಾವಿರ ಪುರುಷ ಮತದಾರರಿಗೆ 975 ಮಹಿಳಾ ಮತದಾರರಿದ್ದರು. ಈಗ ಮಹಿಳಾ ಮತದಾರರ ಪ್ರಮಾಣ 979ಕ್ಕೆ ಏರಿಕೆಯಾಗಿದೆ.

18 ಕ್ಷೇತ್ರಗಳ ಪೈಕಿ ಹುಕ್ಕೇರಿ, ಗೋಕಾಕ, ಯಮಕನಮರಡಿ, ಬೆಳಗಾವಿ ಉತ್ತರ ಕ್ಷೇತ್ರಗಳಲ್ಲಿ ಮಹಿಳಾ ಮತದಾರರು ಹೆಚ್ಚಿದ್ದಾರೆ.

1.27 ಲಕ್ಷ ಮತದಾರರ ಹೆಚ್ಚಳ: 2019ರಲ್ಲಿ 19,10,731 ಪುರುಷರು, 18,63,259 ಮಹಿಳೆಯರು ಸೇರಿದಂತೆ 37,73,990 ಮತದಾರರಿದ್ದರು. 2023ರ ಜನವರಿ 5ರಂದು ಅಂತಿಮ ಪಟ್ಟಿ ಪ್ರಕಟಿಸಿದ ವೇಳೆ, ಮತದಾರರ ಸಂಖ್ಯೆ 38,33,037ಕ್ಕೆ ಏರಿಕೆಯಾಗಿತ್ತು. ಈ ಪೈಕಿ 19,36,887 ಪುರುಷರು, 18,96,150 ಮಹಿಳಾ ಮತದಾರರಿದ್ದರು.

ಚುನಾವಣೆ ಸಮೀಪಿಸುತ್ತಿದ್ದಂತೆ, ನೋಂದಣಿ ಪ್ರಕ್ರಿಯೆ ಚುರುಕುಗೊಂಡಿದೆ. ಮಾರ್ಚ್‌ 23ರ ವೇಳೆಗೆ, 19,68,928 ಪುರುಷರು, 19,32,576 ಮಹಿಳೆಯರು, 141 ಇತರರು ಸೇರಿದಂತೆ 39,01,645 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. ನಾಲ್ಕು ವರ್ಷಗಳಿಗೆ ಹೋಲಿಸಿದರೆ, 1.27 ಲಕ್ಷ ಮತದಾರರ ಸಂಖ್ಯೆ ಹೆಚ್ಚಳವಾಗಿದೆ. ಈ ಪೈಕಿ 58,197 ಪುರುಷರು, 69,317 ಮಹಿಳೆಯರು(ಪುರುಷರಿಗಿಂತ 11,120 ಹೆಚ್ಚು) ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಜಾಗೃತಿ ಮೂಡಿಸುತ್ತಿದ್ದೇವೆ: ‘ಸ್ವೀಪ್‌ ಸಮಿತಿಯು ಕಾಲೇಜುಗಳು, ಮಹಿಳಾ ಸಂಘ-ಸಂಸ್ಥೆಗಳ ಮೂಲಕ ಜಾಗೃತಿ ಮೂಡಿಸುತ್ತಿರುವ ಪರಿಣಾಮ, ಮಹಿಳಾ ಮತದಾರರು ಹೆಚ್ಚಿನ ಪ‍್ರಮಾಣದಲ್ಲಿ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಮತದಾನ ಮಹತ್ವದ ಕುರಿತು ತಿಳಿವಳಿಕೆ ಮೂಡಿಸಲಾಗುತ್ತಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.

‘ಈ ಚುನಾವಣೆಯಲ್ಲಿ ಮತ ಚಲಾವಣೆಗೆ ಯುವಕರು ಉತ್ಸಾಹ ತೋರುತ್ತಿದ್ದಾರೆ. ಕಳೆದೊಂದು ವರ್ಷದಲ್ಲಿ 76 ಸಾವಿರ ಯುವ ಮತದಾರರೂ ಹೆಸರು ನೋಂದಾಯಿಸಿಕೊಂಡಿದ್ದಾರೆ. 2023ರ ಏ.1ಕ್ಕೆ 18 ವರ್ಷ ಪೂರ್ಣಗೊಳ್ಳಲಿರುವ 11 ಸಾವಿರ ಮತದಾರರು, ನೋಂದಣಿಗೆ ಅರ್ಜಿ ಪಡೆದಿದ್ದಾರೆ’ ಎಂದೂ ಹೇಳಿದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ