ಬೆಂಗಳೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಬೆಳಗಾವಿ ಜಿಲ್ಲೆಗೆ ಆಗಮಿಸಲಿದ್ದಾರೆ.
ಬೆಳಗ್ಗೆ ಬೆಂಗಳೂರಿನಿಂದ ಕಲಬುರ್ಗಿಗೆ ತೆರಳುವು ಬೊಮ್ಮಾಯಿ ಅಲ್ಲಿ ಪಿಎಂ ಮಿತ್ರ ಪಾರ್ಕ್ ಗೆ ಚಾಲನೆ ನೀಡುವರು. ನಂತರ ಮಧ್ಯಾಹ್ನ 1.30ಕ್ಕೆ ಬೆಳಗಾವಿಗೆ ಆಗಮಿಸಲಿರುವ ಅವರು, ಸುವರ್ಣ ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಜಗಜ್ಯೋತಿ ಬಸವೇಶ್ವರ, ಡಾ.ಬಾಬಾ ಸಾಹೇಬ ಅಂಬೇಡ್ಕರ್ ಪ್ರತಿಮೆಗಳನ್ನು ಅನಾವರಣಗೊಳಿಸಲಿದ್ದಾರೆ.
ನಂತರ ಗೋಕಾಕಕ್ಕೆ ತೆರಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಜೆ 5.30ಕ್ಕೆ ಸವದತ್ತಿಗೆ ತೆರಳಿ ಅಲ್ಲಿ ಸಹ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಧಾರವಾಡಕ್ಕೆ ಪ್ರಯಾಣ ಬೆಳೆಸುವರು.


ನಿಖರ, ನಿರಂತರ ಮತ್ತು ನಿಷ್ಪಕ್ಷ
Laxmi News 24×7