Breaking News

ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆಸಿದ್ದರಾಮಯ್ಯ ಹೊಸ ಬಾಂಬ್

Spread the love

ಮೈಸೂರು: ವಿಧಾನಸಭಾ ಚುನಾವಣೆ ಹೊತ್ತಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ತಿಳಿಸಿದ್ದಾರೆ.

ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವರುಣಾದಲ್ಲಿ ನನ್ನನ್ನು ಸೋಲಿಸುವ ನಿಟ್ಟಿನಲ್ಲಿ ಹಾಗು ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿರುವುದು ನಿಜ ಎಂದು ಹೇಳಿದ್ದಾರೆ.

2018ರ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಈ ಎರಡೂ ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡಿದ್ದವು. ಅದೇ ರೀತಿ ಈಗಲೂ ಮೈತ್ರಿ ಮಾಡಿಕೊಂಡರೆ ಅಚ್ಚರಿಯಿಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಕಟ್ಟಿಹಾಕುವ ನಿಟ್ಟಿನಲ್ಲಿ ಬೆಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆಯೇ ಎಂಬ ಹೊಸ ಚರ್ಚೆ ರಾಜ್ಯ ರಾಜಕೀಯ ವಲಯದಲ್ಲಿ ಶುರುವಾಗಿದೆ.


Spread the love

About Laxminews 24x7

Check Also

ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Spread the loveಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ  ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ