Breaking News

ಬಿಜೆಪಿ ಶಾಸಕರಿಗೆ ಡಿಕೆ ಶಿವಕುಮಾರ್ ಟಿಕೆಟ್ ಆಮಿಷ: ಸಿಎಂ ಬೊಮ್ಮಾಯಿ

Spread the love

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಳೆದ ಎರಡು ಮೂರು ದಿನಗಳಿಂದ ನಮ್ಮ ಶಾಸಕರಿಗೆ ಫೋನ್ ಮಾಡುತ್ತಿದ್ದಾರೆ. ಟಿಕೆಟ್ ಭರವಸೆ ನೀಡುತ್ತಿದ್ದಾರೆ. ಹತಾಶೆಯಿಂದ ‌ನಮ್ಮ ಪಕ್ಷದವರನ್ನು ಸಂಪರ್ಕಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ ಎನ್ನುವುದಕ್ಕೆ ಇದೆ ಸಾಕ್ಷಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಡಿಪಿಐ ಸಂಘಟನೆಯಿಂದ ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಮಾತನಾಡಿ, ಎಸ್ ಡಿಪಿಐನವರು ನನನ್ನು ಹೊಗಳಲು ಸಾಧ್ಯನಾ? ಎಸ್ ಡಿಪಿಐ ಒಂದು ದೇಶದ್ರೋಹಿ ಸಂಘಟನೆ. ಅವರು ದೇಶದ ವಿರುದ್ಧ ಚಟುವಟಿಕೆ ಮಾಡುವವರು. ಭಾರತದ ದೇಶದ ಅಲ್ಪಸಂಖ್ಯಾತರ ವಿರೋಧಿಗಳೇ ಎಸ್ ಡಿಪಿಐ ನವರು. ಅವರಿಂದ ನಾನೇನು ಹೊಗಳಿಕೆ ಬಯಸಲ್ಲ. ಯಾವಾಗಲು ನಮ್ಮ ವಿರೋಧಿಗಳು ಇದ್ದಾರೆ. ಅವರ ಹೇಳಿಕೆಗೆ ಸೊಪ್ಪು ಹಾಕುವುದಿಲ್ಲ. ಖಂಡಿತವಾಗಿಯೂ ಕಾನೂನು ಕ್ರಮ ಆಗುತ್ತದೆ. ಜನ ತೀರ್ಮಾನ ಮಾಡುತ್ತಾರೆ ಎಂದರು


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ