ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜ್ಯ ರಾಜಧಾನಿ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ತಮಿಳುನಾಡಿನಲ್ಲಿ 9 ಮೀಟರ್ ಗಾಳಿಯ ದಿಕ್ಕಿನಲ್ಲಿ ಬದಲಾವಣೆ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ದಟ್ಟವಾದ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ತುಂತುರು ಮಳೆ ಆರಂಭವಾಗಿದೆ.
Laxmi News 24×7