Breaking News

ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನಮಾಡಲು ಅವಕಾಶ

Spread the love

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನ (ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಮಾಡಿದ ಮನವಿ ಪುರಸ್ಕರಿಸಿರುವ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಇಂಥದೊಂದು ಅವಕಾಶ ಕಲ್ಪಿಸಿದೆ.

ಇದರಿಂದಾಗಿ ನಾನಾ ಕಡೆಯಲ್ಲಿ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ‌ ಮಾಡುತ್ತಿದ್ದ ಕಾರ್ಯ ನಿರತ ಪತ್ರಕರ್ತರು ಮತದಾನ ವಂಚಿತರಾಗುವುದು ತಪ್ಪಿದಂತಾಗಿದೆ. ಕರ್ತವ್ಯ ನಿರತರಾಗಿದ್ದಲ್ಲಿಂದಲೇ (ಅಗತ್ಯವಿದ್ದವರು) ತಮ್ಮ ಮತವಿರುವ ಕ್ಷೇತ್ರದಲ್ಲಿ ಮತದಾನ ಮಾಡಲು ಅವಕಾಶ ದೊರೆತಿರುವುದು ಅನುಕೂಲವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.

ಆನ್ ಲೈನ್ ವೋಟಿಂಗ್ ಅವಕಾಶ ಕೋರಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕೆಯುಡಬ್ಲ್ಯೂಜೆ ಪತ್ರ ಬರೆದಿತ್ತು.
ದೃಶ್ಯ ಮುದ್ರಣ, ರೇಡಿಯೋ ಮಾಧ್ಯಮಗಳ ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರು ಪ್ರತಿ ಚುನಾವಣೆ ವೇಳೆಯಲ್ಲೂ ಮತದಾನದಿಂದ ವಂಚಿತರಾಗುತ್ತಿದ್ದಾರೆ ಎನ್ನುವ ವಿಷಯವನ್ನು ಗಮನಕ್ಕೆ ತಂದಿತ್ತು.

ಕಾರ್ಯದೊತ್ತಡದ ನಡುವೆ ತಮ್ಮ ಸ್ವಂತ ಕ್ಷೇತ್ರಗಳಿಗೆ ಹೋಗಿ ಮತದಾನ ಮಾಡಲು ಆಗುತ್ತಿಲ್ಲ. ಹೀಗಾಗಿ ಬಹುತೇಕ ಪತ್ರಕರ್ತರು ಮತದಾನದಿಂದ ದೂರವೇ ಉಳಿಯುತ್ತಿದ್ದಾರೆ. ಆದ್ದರಿಂದ ಅಗತ್ಯವಿರುವ ಪತ್ರಕರ್ತರಿಗೂ ಆನ್ ಲೈನ್ ಮೂಲಕ ಮತದಾನ ಮಾಡುವ ವ್ಯವಸ್ಥೆ ಮಾಡಿಕೊಡಬೇಕು ಎಂದು ಕೆಯುಡಬ್ಲ್ಯೂಜೆ ವಿನಂತಿಸಿಕೊಂಡಿತ್ತು.

ಧನ್ಯವಾದ:
ಪತ್ರಕರ್ತರ ಬೇಡಿಕೆ ಪರಿಗಣಿಸಿ ಪೋಸ್ಟಲ್ ವೋಟಿಂಗ್ ಅವಕಾಶ ಮಾಡಿಕೊಟ್ಟಿರುವ ಚುನಾವಣಾ ಆಯೋಗಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಧನ್ಯವಾದ ತಿಳಿಸಿದ್ದಾರೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.

Spread the loveಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ