Breaking News
Home / ರಾಜಕೀಯ / 2013, 2018 ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಏನಿತ್ತು ಗೊತ್ತಾ?

2013, 2018 ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಏನಿತ್ತು ಗೊತ್ತಾ?

Spread the love

ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ವೇಳಾಪಟ್ಟಿ ಘೋಷಣೆ ಮಾಡಿದೆ. ಆ ಪ್ರಕಾರ ಇಂದಿನಿಂದಲೇ ನೀತಿ ಸಂಹಿತಿ ಜಾರಿಯಾಗಿದ್ದು ಏಪ್ರಿಲ್ 13ರಂದು ಅಧಿಸೂಚನೆ ಹೊರಡಿಸಲಾಗುತ್ತದೆ.

ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕಡೆಯ ದಿನ, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯುತ್ತದೆ.

ಏಪ್ರಿಲ್ 24 ಅಭ್ಯರ್ಥಿಗಳು ನಾಮಪತ್ರಗಳನ್ನು ವಾಪಸ್ ಪಡೆಯಲು ಕಡೆಯ ದಿನವಾಗಿರುತ್ತದೆ.

ಮೇ 10 ರಂದು ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು ಮೇ 13 ರಂದು ಶನಿವಾರ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಅಸೆಂಬ್ಲಿ ಅವಧಿ ಮೇ 23ಕ್ಕೆ ಮುಗಿಯುತ್ತದೆ. ಅಷ್ಟೊರಳಗೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕು.

ಈ ಸಂದರ್ಭದಲ್ಲಿ ಸಹಜವಾಗಿ ಈ ಹಿಂದಿನ 2018 ಹಾಗೂ 2013ರ ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ವೇಳಾಪಟ್ಟಿ ಏನಿತ್ತು? ಎಂಬ ಕುತೂಹಲ ಬಹುತೇಕರಲ್ಲಿ ಇರುತ್ತದೆ. ಅದಕ್ಕೆ ಉತ್ತರ ಇಲ್ಲಿದೆ.

2018

2018 ರಲ್ಲಿ ಚುನಾವಣಾ ಆಯೋಗ ಮಾರ್ಚ್ 27ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಘೋಷಣೆ ಮಾಡಿತ್ತು. ಆ ಪ್ರಕಾರ ಏಪ್ರಿಲ್ 17ರಂದು ನೋಟಿಫಿಕೇಶನ್ ಹೊರಡಿಸಲಾಗಿತ್ತು. ಏಪ್ರಿಲ್ 24 ನಾಮಪತ್ರ ಸಲ್ಲಿಸಲು ಕಡೆಯ ದಿನಾಂಕವಾಗಿತ್ತು. ಏಪ್ರಿಲ್ 25 ನಾಮಪತ್ರ ಪರಿಶೀಲನೆ, ಏಪ್ರಿಲ್ 27 ನಾಮಪತ್ರ ವಾಪಸ್ ಪಡೆಯುವ ದಿನವಾಗಿತ್ತು. ಮೇ 12 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದು ಮೇ 15 ರಂದು ಫಲಿತಾಂಶ ಪ್ರಕಟವಾಗಿತ್ತು. ಈ ಚುನಾವಣೆಯಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಯಾರಿಗೂ ಬಹುಮತಬಾರದೇ ಅತಂತ್ರವಾಗಿತ್ತು.

2013

ಇನ್ನು 2013 ರಲ್ಲಿ ಚುನಾವಣಾ ಆಯೋಗ ಮಾರ್ಚ್ 20ಕ್ಕೆ ವೇಳಾಪಟ್ಟಿ ಘೋಷಣೆ ಮಾಡಿತ್ತು. ಆ ಪ್ರಕಾರ ಏಪ್ರಿಲ್ 10ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಏಪ್ರಿಲ್ 17 ನಾಮಪತ್ರ ಸಲ್ಲಿಸಲು ಕಡೆಯ ದಿನಾಂಕವಾಗಿತ್ತು. ಏಪ್ರಿಲ್ 18 ನಾಮಪತ್ರ ಪರಿಶೀಲನೆ, ಏಪ್ರಿಲ್ 20 ನಾಮಪತ್ರ ವಾಪಸ್ ಪಡೆಯುವ ದಿನವಾಗಿತ್ತು. ಮೇ 5 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದು ಮೇ 8 ರಂದು ಫಲಿತಾಂಶ ಪ್ರಕಟವಾಗಿತ್ತು. ಈ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ 122 ಸ್ಥಾನಗಳನ್ನು ಪಡೆದು ಸರ್ಕಾರ ರಚಿಸಿತ್ತು.


Spread the love

About Laxminews 24x7

Check Also

ರಕ್ಷಾ ಬಂಧನ ದಿನಾಂಕ, ಶುಭ ಸಮಯ, ಮಹತ್ವವನ್ನು ತಿಳಿಯಿರಿ

Spread the love ರಕ್ಷಾ ಬಂಧನ ಸಹೋದರ ಸಹೋದರಿಯರ ನಡುವಿನ ಪ್ರೀತಿಯ ಸಂಕೇತವಾಗಿದೆ. ರಕ್ಷಾ ಬಂಧನ ಹಬ್ಬವನ್ನು ಪ್ರತಿ ವರ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ