Breaking News

ಶಿವಶಂಕರಪ್ಪ ಮತ್ತು ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ವಿರುದ್ಧ ಎಫ್ ಐ ಆರ್

Spread the love

ದಾವಣಗೆರೆ: ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷದ ನಾಯಕರು ಭಾರಿ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ದಾವಣಗೆರೆಯ ಕೆಟಿಜೆ ನಗರದಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಎಸ್ ಎಸ್ & SSM ಅಭಿಮಾನಿಗಳ ಹೆಸರಲ್ಲಿ ಜನರಿಗೆ ಗಿಫ್ಟ್ ಹಂಚಲಾಗುತ್ತಿತ್ತು. ಈ ವೇಳೆ ಪೊಲೀಸರು ನಡೆಸಿದ ದಾಳಿಯಲ್ಲಿ 7.19 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.

ಈ ಹಿನ್ನೆಲೆಯಲ್ಲಿ ಕೆಟಿಜೆ ನಗರದ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ