Breaking News

ಭಾರತ ಯಾವಾಗಲೂ ಸಿದ್ಧವಾಗಿದೆ – ಕ್ಸಿ ಜಿನ್‍ಪಿಂಗ್ ಯುದ್ಧ ಹೇಳಿಕೆಗೆ ಶಾ ತಿರುಗೇಟು

Spread the love

ನವದೆಹಲಿ: ಪೂರ್ವ ಲಡಾಖ್‍ನಲ್ಲಿ ಪರಿಸ್ಥಿತಿ ಬಿಗಡಾಯಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಚ್ಚರಿಯ ಹೇಳಿಕೆ ನೀಡಿದ್ದು, ಭಾರತೀಯ ರಕ್ಷಣಾ ಪಡೆ ಯುದ್ಧಕ್ಕೆ ಯಾವಾಗಲೂ ಸಿದ್ಧವಾಗಿದೆ. ಭಾರತದ ಸಾರ್ವಭೌತ್ವ ಹಾಗೂ ಗಡಿಯನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಚೀನಾದ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಭಾರತದದೊಂದಿಗೆ ಯುದ್ಧಕ್ಕೆ ಚೀನಾ ಸಿದ್ಧವಾಗಬೇಕು ಎಂದು ಪೀಪಲ್ಸ್ ಲಿಬರೇಷನ್ ಆರ್ಮಿಗೆ ಹೇಳಿಕೆ ನೀಡಿದ ಬೆನ್ನಲ್ಲೇ ಅಮಿತ್ ತಕ್ಕ ಉತ್ತರ ನೀಡಿದ್ದಾರೆ. ಗುವಾಂಗ್‍ಡಾಂಗ್ ಗೆ ಭೇಟಿ ನೀಡಿದ ವೇಳೆ ಜಿನ್‍ಪಿಂಗ್ ಈ ಮಾತನ್ನು ಹೇಳಿದ್ದಾರೆ. ನಿಮ್ಮ ಮನಸ್ಸು ಹಾಗೂ ಶಕ್ತಿಯನ್ನು ಯುದ್ಧಕ್ಕೆ ಸಿದ್ಧಪಡಿಸಿ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ಅಮಿತ್ ಶಾ ಯುದ್ಧದ ಬಗ್ಗೆ ಮಾತನಾಡಿದ್ದಾರೆ.

ಖಾಸಗಿ ವಾಹಿನಿ ನಡೆಸಿದ ಸಂದರ್ಶನದಲ್ಲಿ ಚೀನಾದ ಯುದ್ಧದ ಕೂಗಿನ ಕುರಿತು ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಸೇನೆ ಯಾವುದೇ ಅಂತಿಮ ನಿರ್ಧಾರಕ್ಕೆ ಯಾವಾಗಲೂ ಸಿದ್ಧವಾಗಿರುತ್ತದೆ. ಪ್ರತಿ ದೇಶಗಳೂ ಸಿದ್ಧವಾಗಿರುತ್ತವೆ. ಯಾವುದೇ ನಿರ್ದಿಷ್ಟ ಹೇಳಿಕೆಯನ್ನಾಧರಿಸಿ ನಾನು ಈ ಮಾತನ್ನು ಹೇಳುತ್ತಿಲ್ಲ. ಆದರೆ ಭಾರತದ ರಕ್ಷಣಾ ಪಡೆ ಯಾವುದೇ ಸಮಯದಲ್ಲಿ ಯುದ್ಧಕ್ಕೆ ಸಿದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಈ ಹಿಂದೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜಿನ್‍ಪಿಂಗ್ ಯಾವುದೇ ದೇಶದೊಂದಿಗೆ ಚೀನಾ ಕೋಲ್ಡ್, ಹಾಟ್ ಯಾವುದೇ ಯುದ್ಧದ ಉದ್ದೇಶ ಹೊಂದಿಲ್ಲ ಎಂದಿದ್ದರು. ಆದರೆ ಇದೀಗ ತಮ್ಮ ಸೇನೆ ಯುದ್ಧಕ್ಕೆ ಸಿದ್ಧವಾಗಲು ಸೂಚಿಸಿದ್ದರೆ. ಈ ಮೂಲಕ ಚೀನಾದ ಕುತಂತ್ರ ಬುದ್ಧಿ ಮತ್ತೆ ಸಾಬೀತಾಗಿದೆ.

ಗಲ್ವಾನ್ ಘರ್ಷಣೆಯಲ್ಲಿ ಕರ್ನಲ್ ಸಂತೋಷ್ ಬಾಬು ಸೇರಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಅಲ್ಲದೆ ಭಾರತೀಯ ಸೈನಿಕರು ನಡೆಸಿದ ಪ್ರತಿ ದಾಳಿಗೆ ಚೀನಾದ ಹಲವು ಸೈನಿಕರು ಸಹ ಸಾವನ್ನಪ್ಪಿದ್ದರು. ಆದರೆ ಚೀನಾ ಈ ಕುರಿತು ಬಾಯ್ಬಿಟ್ಟಿರಲಿಲ್ಲ. ಈ ಘಟನೆ ನಡೆದ ಬಳಿಕ ಹಲವು ಬಾರಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದೇ ರೀತಿ ಎರಡೂ ದೇಶಗಳ ಪ್ರಮುಖರ ನಡುವೆ ಸಭೆಗಳು ಸಹ ನಡೆದಿವೆ. ಆದರೆ ಚೀನಾ ತನ್ನ ಕುತಂತ್ರ ಬುದ್ಧಿಯನ್ನು ಮಾತ್ರ ಬಿಟ್ಟಿಲ್ಲ.


Spread the love

About Laxminews 24x7

Check Also

ನೈಋತ್ಯ ರೈಲ್ವೆಗೆ ಸೆಪ್ಟೆಂಬರ್​ನಲ್ಲಿ ಭರ್ಜರಿ ಆದಾಯ: ಸರಕು ಸಾಗಣೆಯಿಂದ ₹427, ಪ್ರಯಾಣಿಕರಿಂದ ₹282 ಕೋಟಿ ಗಳಿಕೆ

Spread the love ಹುಬ್ಬಳ್ಳಿ: ಸೆ. 2025ರಲ್ಲಿ ನೈಋತ್ಯ ರೈಲ್ವೆಯು ಸರಕು ಸಾಗಣೆ ಮತ್ತು ಆದಾಯದಲ್ಲಿ ಅತ್ಯುತ್ತಮ ಸಾಧನೆ ದಾಖಲಿಸಿದೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ