Breaking News
Home / ರಾಜಕೀಯ / ಏಳು( IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿ ದ ರಾಜ್ಯ ಸರ್ಕಾರ

ಏಳು( IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿ ದ ರಾಜ್ಯ ಸರ್ಕಾರ

Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ.

ಈ ಸಂಬಂಧ ಆದೇಶ ಹೊರಡಿಸಿರುವಂತ ಸರ್ಕಾರವು, ಕೆಪಿಸಿಎಲ್ ಎಂ.ಡಿಯಾಗಿದ್ದಂತ ಎಂ ಎಸ್ ಶ್ರೀಖರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸೆಕ್ರೇಟರಿಯಾಗಿ ನೇಮಕ ಮಾಡಲಾಗಿದೆ.

 

ಆಯುಷ್ ಇಲಾಖೆಯ ಕಮೀಷನರ್ ಆಗಿದ್ದಂತ ಮಂಜುನಾಥ್ ಜೆ ಅವರನ್ನು ಎಡ್ಸ್ ನಿಯಂತ್ರಣ ಸೊಸೈಟಿಯ ಪ್ರೊಜೆಕ್ಟ್ ಡೈರೆಕ್ಟರ್ ಆಗಿ ನೇಮಿಸಿದೆ.

ಶೈಖ್ ತನ್ವೀರ್ ಆಸಿಪ್ ಅವರನ್ನು ಅಬಕಾರಿ ಇಲಾಖೆಯ ಹೆಚ್ಚುವರಿ ಕಮೀಷನರ್ ಹುದ್ದೆಯಿಂದ ವರ್ಗಾವಣೆ ಮಾಡಿ, ಮಂಡ್ಯ ಜಿಲ್ಲಾ ಪಂಚಾಯ್ತಿ ಸಿಇಓ ಆಗಿ ನೇಮಿಸಿದೆ. ಉನ್ನತ ಶಿಕ್ಷಣ ಇಲಾಖೆಯ ಡೆಪ್ಯೂಟಿ ಸೆಕ್ರೇಟರಿ ಲೋಖಂದೆ ಸಹೇಲ್ ಸುಧಾಕರ್ ಅವರನ್ನು ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಸಿಇಒ ಆಗಿ ನೇಮಿಸಲಾಗಿದೆ.

ಹುದ್ದೆಯ ನಿರೀಕ್ಷೆಯಲ್ಲಿದ್ದಂತ ರಂಗಪ್ಪ ಎಸ್ ಅವರನ್ನು ಕೆ ಎಸ್ ಎಂ ಎಸ್ ಸಿ ಎಲ್ ಎಂ.ಡಿಯಾಗಿ ನೇಮಿಸಿದೆ. ಕಲಬುರ್ಗಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದಂತ ಗರೀಂ ಪನ್ವರ್ ಅವರನ್ನು ಯಾದಗಿರಿ ಜಿಲ್ಲಾ ಪಂಚಾಯ್ತಿ ಸಿಇಒ ಆಗಿ ನೇಮಕ ಮಾಡಲಾಗಿದೆ.

2018 ಬ್ಯಾಚ್ ನ ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಆಕೃತಿ ಬನ್ಸಾಲ್ ಅವರನ್ನು ದೆಹಲಿಯ ಕರ್ನಾಟಕ ಭವನದ ಹೆಚ್ಚುವರಿ ಪ್ರಾದೇಶಿಕ ಕಮೀಷನರ್ ಆಗಿ ನಿಯೋಜಿಸಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ