Breaking News
Home / ಜಿಲ್ಲೆ / ಬೆಳಗಾವಿ / ಅಥಣಿ / ವಕೀಲರ ಮೇಲೆ ಹಲ್ಲೆ: ಪ್ರತಿಭಟನೆ

ವಕೀಲರ ಮೇಲೆ ಹಲ್ಲೆ: ಪ್ರತಿಭಟನೆ

Spread the love

ಥಣಿ: ವಾಹನ ನಿಲುಗಡೆ ವಿಚಾರವಾಗಿ ಪೊಲೀಸರು ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಖು ಎಂದು ಆಗ್ರಹಿಸಿ ಅಥಣಿ ವಕೀಲರ ಸಂಘದಿಂದ ಶಿವಯೋಗಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮೇತ್ರಿ ಮಾತನಾಡಿ, ‘ಮೂಲತಃ ರಾಮದುರ್ಗದ ವಕೀರೊಬ್ಬರು ಪ್ರಸ್ತುತ ಬೆಳಗಾವಿಯಲ್ಲಿ ವೃತ್ತಿ ನಡೆಸುತ್ತಿದ್ದು, ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿ ಠಾಣೆ ಹಿಂಬದಿ ವಾಹನ ನಿಲ್ಲಿಸಿದ್ದರು.

ಈ ವೇಳೆ ಮಹಿಳಾ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿ ವಾಹನ ತೆಗೆಯುವಂತೆ ಹೇಳಿದ್ದಾರೆ. ವಾದ-ವಿವಾದ ನಡೆದು ಪರಿಸ್ಥಿತಿ ಹಲ್ಲೆ ನಡೆಸುವ ಹಂತಕ್ಕೆ ಹೋಗಿದೆ. ಪೊಲೀಸರು ಯುವ ವಕೀಲನನ್ನು ಥಳಿಸಿದ್ದಾರೆ’ ಎಂದು ಆರೋಪಿಸಿದರು.

ಡಿ.ಬಿ.ಠಕ್ಕಣ್ಣವರ, ವಿ.ಎಸ್. ಪಾಟೀಲ, ಕಿರಣ ಸಬಕಾಳೆ, ಎಸ್.ಎಸ್. ಪಾಟೀಲ, ಅರುಣ ಮೇಲ್ಗಡೆ, ಎಸ್.ಕೆ. ಮಟ್ಟೆಪ್ಪನವರ, ಬಿ.ಪಿ. ಕಾಂಬಳೆ, ಮಾದೇವ ಯಕ್ಕಂಚಿ, ಪಾಂಡು ಡೋಕೆ ಸೇರಿದಂತೆ ಇತರರಿದ್ದರು.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ