Breaking News
Home / ರಾಜಕೀಯ / ಸಿದ್ದರಾಮಯ್ಯ ಅವರ ಬಯೋಪಿಕ್‌ನ ಪೋಸ್ಟರ್ ರಿಲೀಸ್

ಸಿದ್ದರಾಮಯ್ಯ ಅವರ ಬಯೋಪಿಕ್‌ನ ಪೋಸ್ಟರ್ ರಿಲೀಸ್

Spread the love

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ಜೀವನಾಧರಿತ ಕಥೆಯನ್ನು ಆಧರಿಸಿ ಸಿನಿಮಾಗಳನ್ನು ಮಾಡಲಾಗುತ್ತಿದೆ. ಇದೀಗ ರಾಮನವಮಿ ಹಬ್ಬದ ಶುಭ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಯೋಪಿಕ್‌ನ ಪೋಸ್ಟರ್ ರಿಲೀಸ್ ಆಗಿದೆ.

 

ಚಿತ್ರಕ್ಕೆ ‘ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದ್ದು, ಸಿದ್ದರಾಮಯ್ಯ ಅಭಿಮಾನಿ ಸಂಘದಿಂದ ಸಿನಿಮಾದ ಮೊದಲ ಪೋಸ್ಟರ್​ನ್ನು ಸಿದ್ದರಾಮಯ್ಯ ನಿವಾಸದಲ್ಲಿ ಇಂದು(ಮಾ.30) ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಸಿದ್ದರಾಮಯ್ಯನವರ ಪಾತ್ರವನ್ನು ತಮಿಳಯ ನಟ ವಿಜಯ್​ ಸೇತುಪತಿ ಮಾಡಲಿದ್ದಾರೆ. ಚಿತ್ರವನ್ನು ಸತ್ಯರತ್ನಂ ನಿರ್ದೇಶಿಸಲಿದ್ದಾರೆ. ಹಯಾತ್ ಫೀರ್ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.

ಈ ಚಿತ್ರವನ್ನು ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ನಿರ್ಮಾಣ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇನ್ನು ಲೀಡರ್ ರಾಮಯ್ಯ ಸಿನಿಮಾವು ಆಗಸ್ಟ್​​ ತಿಂಗಳಲ್ಲಿ ತೆರೆ ಮೇಲೆ ಬರಲಿದೆ.

ಆಗಸ್ಟ್ 3ರಂದು ಮಾಜಿ ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬವಿದ್ದು, ಈ ದಿನವೇ ಸಿನಿಮಾ ತೆರೆಗೆ ಅಪ್ಪಳಿಸಲಿದೆ. ಪಾರ್ಟ್ 1 ಮತ್ತು ಪಾರ್ಟ್ 2 ಎರಡು ಭಾಗವಾಗಿ ಚಿತ್ರ ಬಿಡುಗಡೆಗೆ ಯೋಜನೆ ರೂಪಸಲಾಗಿದೆ. ಈ ಸಿನಿಮಾ ಅಂದಾಜು 30 ಕೋಟಿ ರೂ. ಬಜೆಟ್ ಆಗಲಿದೆ ಎಂದು ಲೀಡರ್ ರಾಮಯ್ಯ ಚಿತ್ರತಂಡ ಹೇಳಿಕೊಂಡಿದೆ.

ಲೀಡರ್ ರಾಮಯ್ಯ ಸಿನಿಮಾದ ನಿರ್ದೇಶಕ ಸತ್ಯರತ್ನಂ ಮಾತನಾಡಿ, ಲೀಡರ್ ರಾಮಯ್ಯ ಚಿತ್ರದಲ್ಲಿ ಲವ್ ಸ್ಟೋರಿಯೂ ಇದೆ. ಶೇ.70% ಸಿದ್ದರಾಮಯ್ಯ ಜೀವನ ಚರಿತ್ರೆಯನ್ನ ಒಳಗೊಂಡಿರುವ ಚಿತ್ರ ಇದಾಗಿದೆ. ಬಾಲ್ಯದ ಜೀವನ ಮತ್ತು ರಾಜಕೀಯಕ್ಕೆ ಎಂಟ್ರಿಯಾಗುವ ಅಂಶ ಸಿನಿಮಾದಲ್ಲಿದೆ. ಬಾಕಿ 30% ಲವ್ ಸ್ಟೋರಿ ಕುರಿತಾದ ಅಂಶ ಸಿನಿಮಾದಲ್ಲಿ ಇದೆ. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಲಿದೆ ಎಂದು ಹೇಳಿದ್ದಾರೆ.

 


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ