Breaking News

BJPಗೆ ಗುಡ್ ಬೈ ಹೇಳಿದ ಶಾಸಕ ಗೋಪಾಲಕೃಷ್ಣ

Spread the love

ಶಿರಸಿ: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಜೋರಾಗಿದ್ದು, ಆಡಳಿತಾರೂಢ ಬಿಜೆಪಿಗೆ ಶಾಸಕರೇ ಶಾಕ್ ನೀಡಿದ್ದಾರೆ. ಬಿಜೆಪಿ ಹಿರಿಯ ಶಾಸಕ ಎನ್.ವೈ.ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ.

ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕಚೇರಿಗೆ ಆಗಮಿಸಿದ ಶಾಸಕರು, ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದರು.

ಗೋಪಾಲಕೃಷ್ಣ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದು, ಮೊಳಕಾಲ್ಮೂರು ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ