Breaking News

ಎಸ್​ಎಸ್​ಎಲ್​ಸಿ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ!

Spread the love

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಇಂದಿನಿಂದ ಆರಂಭಗೊಂಡಿದ್ದು, ಪರೀಕ್ಷೆ ಪ್ರಾರಂಭವಾದ ಮೊದಲ ದಿನವೇ ಕನ್ನಡ ಭಾಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಪ್ರಥಮ ಭಾಷೆ ಕನ್ನಡ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಕಿಡಿಗೇಡಿಗಳು ಸೋಶಿಯಲ್​​ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಯಾಗಿರುವ ಬಗ್ಗೆ ಶಿಕ್ಷಣ ಇಲಾಖೆ ಹಾಗೂ ಯಾವುದೇ ಅಧಿಕಾರಿಗಳು ಖಚಿತಪಡಿಸಿಲ್ಲ.

ಪರೀಕ್ಷೆಯು ಬೆಳಿಗ್ಗೆ 10.30 ರಿಂದ ಆರಂಭವಾಗಿದ್ದು, ಮಧ್ಯಾಹ್ನ 1.30 ರವರೆಗೆ ನಡೆಯಲಿದೆ. ಇಂದಿನಿಂದ ಆರಂಭವಾದ ಪರೀಕ್ಷೆಗಳು ಏಪ್ರಿಲ್​ 15ರವರೆಗೆ ನಡೆಯಲಿವೆ. ಈ ಬಾರಿ ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ರಾಜ್ಯಾದ್ಯಂತ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆ ಕುರಿತಾಗಿ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ