ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಲಕ್ಷಣ ಸವದಿ ಮತ್ತು ರಮೇಶ್ ಜಾರಕಿಹೊಳಿ ನಡುವೆ ಫೈಟ್ ಶುರುವಾಗಿದೆ. ಈ ವಿಚಾರವಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಪ್ರತಿಕ್ರಿಯೆ ನೀಡಿದ್ದಾರೆ.
ಚುನಾವಣೆ ದಿನಾಂಕ ಘೋಷಣೆಯಾಗಿದೆ.
ಹೀಗಾಗಿ ಎಲ್ಲ ಪಕ್ಷದಲ್ಲೂ ಟಿಕೆಟ್ ಆಕಾಂಕ್ಷಿಗಳು ಬಹಳಷ್ಟು ಜನ ಇದ್ದಾರೆ. ಆದರೆ ಟಿಕೆಟ್ ಹಂಚಿಕೆ ಆದ್ಮೇಲೆ ಅಸಮಾಧಾನ ಉಂಟಾಗುವುದು. ಸಹಜ. ಆದರೆ ಇದಲ್ಲವನ್ನೂ ಹೈಕಮಾಂಡ್ ಏನ್ ನಿರ್ಧಾರ ಕೈಗೊಳ್ಳುತ್ತದೆ ಅದನ್ನು ಎಲ್ಲರೂ ಕೇಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ 10 ಕ್ಷೇತ್ರದಲ್ಲಿ ಬಿಜೆಪಿ, 8 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆಪರೇಷನ್ ಕಮಲ ಮೂಲಕ ಮೂರು ಜನ ಶಾಸಕರು ಬಿಜೆಪಿಗೆ ಬಂದಿದ್ದಾರೆ. ಈ ಚುನಾವಣೆಯಲ್ಲಿ 13 ಸ್ಥಾನ ಉಳಿಸಿಕೊಳ್ಳುವ ಯತ್ನ ನಡೆದಿದೆ. ಕ್ಷೇತ್ರ ವಾರು ಮತದಾನ ಮಾಡಿ ಕಾರ್ಯಕರ್ತರ ಅಭಿಪ್ರಾಯ ಇಂದು ಸಂಗ್ರಹಿಸಲಾಗುತ್ತಿದೆ. ಒಳ್ಳೆಯ ವ್ಯವಸ್ಥೆ ಇದು ಎಂದು ನಾನು ಭಾವಿಸಿದ್ದೇನೆ. ಇದರಿಂದ ಕ್ಷೇತ್ರದಲ್ಲಿ ಇರುವ ಭಿನ್ನಾಭಿಪ್ರಾಯ ಗೊತ್ತಾಗಲಿದೆ ಎಂದರು.
ಬಿಜೆಪಿಗೆ 130ಸ್ಥಾನ ಗೆಲ್ಲಲಿದೆ ಹೇಳಿಕೆ ವಿಚಾರ;ಯಡಿಯೂರಪ್ಪ ಮಾತು ನೂರಕ್ಕೆ ನೂರರಷ್ಟು ಸತ್ಯ: ವಿ.ಸೋಮಣ್ಣ
ಚಿಕ್ಕಬಳ್ಳಾಪುರ: ಬಿಜೆಪಿಗೆ 130ಸ್ಥಾನ ಗೆಲ್ಲಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಚಿಕ್ಕಬಳ್ಳಾಪುರಲ್ಲಿ ವಸತಿ ಇಲಾಖೆ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬಿ.ಎಸ್ ಯಡಿಯೂರಪ್ಪ ಮಾತಿನಲ್ಲಿ ನೂರಕ್ಕೆ ನೂರರಷ್ಟು ಸತ್ಯವಿದೆ ಎಂದು ವಿ. ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ನಗರದಲ್ಲಿ ಮಾತನಾಡಿದ ಅರು, ಬಿ.ಎಸ್ ಯಡಿಯೂರಪ್ಪ50-60 ವರ್ಷಗಳ ಕಾಲ ರಾಜ್ಯವನ್ನು ಸುತ್ತಾಡಿದ್ದಾರೆ. ಬೂತ್ ಮಟ್ಟದಲ್ಲಿ ಏನು ವಾತಾವರಣವಿದೆ ಅಂತ ಬಿ.ಎಸ್ ಯಡಿಯೂರಪ್ಪ ಅವರಿಗೆ ಗೊತ್ತಿದೆ. ಹೀಗಾಗಿ ಅವರು ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ. ಬಿಜೆಪಿಗೆ 130 ಸ್ಥಾನ ಗೆಲ್ಲಲಿದೆ ಎಂದು ಹೇಳುವುದರಲ್ಲಿ ತಪ್ಪು ಏನು ಇಲ್ಲ ಎಂದು ಹೇಳಿದ್ದಾರೆ.