ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೇ 29ರಿಂದ ತರಗತಿಗಳು ಆರಂಭವಾಗಲಿವೆ.
ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುತ್ತಿದ್ದು, ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಈ ಮಾರ್ಗಸೂಚಿಯಲ್ಲಿ ವಾರ್ಷಿಕ/ಮಾಹೆವಾರು ಪಾಠ ಹಂಚಿಕೆ, ಪಠ್ಯೇತರ ಚಟುವಟಿಕೆಗಳು, ಪರೀಕ್ಷೆ ಮತ್ತು ಮೌಲ್ಯಾಂಕನ ವಿಶ್ಲೇಷಣೆ, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ ಸಿಸಿಇ ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯ ಆಗುವಂತೆ ಶೈಕ್ಷಣಿಕ ಅವಧಿಗಳು, ರಜಾದಿನಗಳನ್ನು ಯೋಜಿಸಿ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
2023ರ ಮೇ 29ರಿಂದ ಅಕ್ಟೋಬರ್ 7
ಅ.25ರಿಂದ 2024ರ ಏ.10ರವರೆಗೆ
ಮಧ್ಯಂತರ ರಜೆ 2023ರ ಅಕ್ಟೋಬರ್ 8ರಿಂದ 24
ಬೇಸಿಗೆ ರಜೆ 2024ರ ಏ.11ರಿಂದ ಮೆ28ರ ವರೆಗೆ
Laxmi News 24×7